ಕುಶಾಲನಗರ, ಆ 02: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ನೂತನ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ನೂತನ ಸಭಾಂಗಣ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಪುರಾತನ ಕಾಲದಲ್ಲಿ ಕೂಡಿಗೆ ಗ್ರಾಮದ ಕೊಡಗಿನ ಕೇಂದ್ರ ಬಿಂದುವಾಗಿತ್ತು. ಇಂದು ಉತ್ತಮ ವಿದ್ಯಾಕ್ಷೇತ್ರವಾಗಿ ರೂಪುಗೊಂಡಿದೆ. ಸೈನಿಕ, ಕ್ರೀಡಾಶಾಲೆಗಳ, ಕೃಷಿ ಕ್ಷೇತ್ರ ಇಲ್ಲಿ ಕಾಣಬಹುದು. ಕಾಲೇಜಿನ ಫಲಿತಾಂಶ ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ಮುಂದಿನ ಸಾಲಿನಲ್ಲಿ ಶೇ. 100 ಫಲಿತಾಂಶ ತರುವಲ್ಲಿ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು. ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿಟ್ಟು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ಭೋಗಪ್ಪ, ಚಂದ್ರು, ಕುಮಾರ್, ಶಿವಮ್ಮ, ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಕಾಲೇಜು ಪ್ರಾಂಶುಪಾಲ ಡಾ.ಬಿ.ಬಸಪ್ಪ , ಬಿಜೆಪಿ ಪ್ರಮುಖರಾದ ಎಂ.ಬಿ.ಜಯಂತ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್, ತಾಪಂ ಮಾಜಿ ಸದಸ್ಯ ಗಣೇಶ್, ಗ್ರಾಪಂ ಮಾಜಿ ಅಧ್ಯಕ್ಷ ಮನುನಂಜುಂಡ, ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್,ಅಭಿಯಂತರ ಸೈಜನ್ ಪೀಟರ್,ಗುತ್ತಿಗೆದಾರ ಮಧು, ಕೂಡಿಗೆ ಭಾಗದ ಬಿಜೆಪಿ ಪ್ರಮುಖರು, ಕಾಲೇಜು ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಮಾಜಿ ಜನಪ್ರತಿನಿಧಿಗಳು ಇದ್ದರು.
Back to top button
error: Content is protected !!