ಕುಶಾಲನಗರ, ಆ 02: ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು.
ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು
ಮಡಿಕೇರಿ ಕ್ಷೇತ್ರ ಶಾಸಕರಾದ ಅಪ್ಪಚ್ಚುರಂಜನ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ದಯಾನಂದ್ ಜನಸಂಖ್ಯಾ ಸ್ಪೋಟದ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭ ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಜಿಲ್ಲಾ ಕುಟಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವೆಂಕಟೇಶ್, ಕಾರ್ಯಕ್ರಮ ಅಧಿಕಾರಿ ಡಾ.ಆನಂದ್, ಟಿಎಚ್ಒ ಶ್ರೀನಿವಾಸ್, ಗುಡ್ಡೆಹೊಸೂರು ಗ್ರಾಪಂ ಅಧ್ಯಕ್ಷೆ ನಂದಿನಿ, ಡಿವೈಎಸ್ಪಿ ಗಂಗಾಧರಪ್ಪ, ಕಾಲೇಜು ಪ್ರಾಂಶುಪಾಲ ಡಾ.ಸೀನಪ್ಪ, ದೈಹಿಕ ಶಿಕ್ಷಣಾಧಿಕಾರಿ ಪ್ರಸಾದ್ ಸಾಲ್ಯಾನ್, ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ಮತ್ತಿತರು ಗಣ್ಯರು ಇದ್ದರು.
Back to top button
error: Content is protected !!