ಪೊಲೀಸ್

ಮದ್ಯಪಾನ‌ ಮಾಡಿ ವಾಹನ ಚಾಲನೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚಾಲಕನ ವಿರುದ್ದ ಪ್ರಕರಣ ದಾಖಲು

ಕುಶಾಲನಗರ, ಜು 06: ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ  ವಿಜಯಕುಮಾರ್ ಹೊಸಮನಿ,  ಕಾಶಿನಾಥ ಜಿ.ಕೆ ಅವರು ಮಡಿಕೇರಿ ನಗರದ ಜಿ.ಟಿ ವೃತ್ತದ ಬಳಿ ಸಂಚಾರಿ ನಿಯಂತ್ರಣದ ಕರ್ತವ್ಯ ನಿರತರಾಗಿದ್ದ ಸಂದರ್ಭ ಕೆಎ-12 ಎಂಸಿ-1753 ವಾಹನವು ಅತಿ ವೇಗದಿಂದ ಬರುತ್ತಿರುವುದನ್ನು ಗಮನಿಸಿ ಪರಿಶೀಲನೆಗಾಗಿ ಕಾರನ್ನು ನಿಲ್ಲಿಸಿದ್ದು ಸದರಿ ಕಾರಿನ ಚಾಲಕನಾದ ಹರೀಶ್ ಬಿ.ಕೆ ಮಧ್ಯಪಾನ ಮಾಡಿರುವುದು ಕಂಡುಬಂದಿರುವುದರಿಂದ ಅಲ್ಕೋಮೀಟರ್ ನಲ್ಲಿ ಪರಿಶೀಲಿಸಲು ಪ್ರಯತ್ನಸಿದಾಗ ಕರ್ತವ್ಯದಲ್ಲಿದ್ದ ಅಧಿಕಾರಿ ಹಾಗೂ ಸಿಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ದೂಡಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಕುರಿತು .ಸಿ.ವಿ.ಶ್ರೀಧರ್, ಪಿಎಸ್‌ಐ, ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಚಾಲಕನಾದ ಹರೀಶ್.ಬಿ.ಕೆ ಎಂಬಾತನ ಮೇಲೆ ಕಾನೂನು ಕ್ರಮ ಕೈಗೊಳ್ಳವಂತೆ ದೂರು  ದಾಖಲಿಸಿದ್ದು ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಾಗೂ ಮದ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ & ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿರುವ ಮೊಣ್ಣಂಗೇರಿ ಗ್ರಾಮದ ನಿವಾಸಿಯಾದ ಆರೋಪಿ ಹರೀಶ.ಬಿ.ಕೆ, (46 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ,

> ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರಿಗೆ ಉದ್ದೇಶಪೂರ್ವಕವಾಗಿ ಯಾವುದೇ ರೀತಿಯಲ್ಲಿ ಅವಮಾನಿಸುವುದು, ನಿಂಧನೆ ಮಾಡುವುದು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸುವ ವ್ಯಕ್ತಿಗಳಿಗೆ ಗರಿಷ್ಠ 05 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ.

> ವಾಹನ ಚಾಲಕರು ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಹಾಗೂ ಅಪಘಾತದಲ್ಲಿ ಜೀವಕ್ಕೆ ಹಾನಿಯಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಪಡಿಸಿದ್ದಲ್ಲಿ ಕೊಲೆಯಲ್ಲದ ಅಪರಾಧಿಕ ನರಹತ್ಯೆ (Calpahle Homicide )ಯನ್ನು ಮಾಡುವ ವ್ಯಕ್ತಿಗೆ ಕನಿಷ್ಠ 03 ವರ್ಷಗಳ ಜೈಲು ಶಿಕ್ಷೆಯನ್ನು ಅಥವಾ ಗರಿಷ್ಠ 07 ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ.

> ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ವಾಹನ ಮಾಲೀಕರು ಆಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮತ್ತು ವಾಹನ ಪರವಾನಿಗೆ (License) ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಆಸ್ಪದ ನೀಡಬಾರದು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು & ಅತೀ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸುವುದು ಅಥವಾ ಬೈಕ್/ಕಾರುಗಳನ್ನು ಚಲಾಯಿಸುತ್ತಾ ಯಾವುದೇ ರೀತಿಯ ಸ್ಪಂಟ್‌ಗಳನ್ನು ಮಾಡಿರುವ ಭಾವಚಿತ್ರ/ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram. Twitter & ctc.) ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡುವುದು ಮತ್ತು ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಪೊಲೀಸ್ ಪ್ರಕಟಣೆ ಸಾರ್ವಜನಿಕರಲ್ಲಿ ಕೋರಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!