ಸನ್ಮಾನ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ

ಕುಶಾಲನಗರ, ಜು 27: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಮೀಪದ ಕೂಡ್ಲೂರು ಹಳ್ಳಿಮನೆ ಸಭಾಂಗಣದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೊಡಗು ಜಿಲ್ಲೆಯ ಒಬ್ಬ ಶಿಕ್ಷಕನಿಗೆ ರಾಜ್ಯಮಟ್ಟದ ಹುದ್ದೆ ದೊರಕಿರುವುದು ಸಂತೋಷ ತಂದಿದೆ. ಉತ್ತಮ ಸಂಘಟನಾ ಚತುರನಾಗಿರುವ ಶಿಕ್ಷಕ ಚೇತನ್, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳ ಧ್ವನಿಯಾಗಿ ಸರ್ಕಾರ ಹಾಗೂ ಶಿಕ್ಷಕರ ನಡುವಿನ ಸೇತುವೆಯಾಗಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆಯಲ್ಲಿ ಶಿಕ್ಷಕರು ಅರ್ಹ ಹಾಗೂ ಶಿಕ್ಷಕರ ಸಮಸ್ಯೆಗಳ ಅರಿವು ಇರುವ ವ್ಯಕ್ತಿಯನ್ನು ಬೆಂಬಲಿಸುವಲ್ಲಿ ತೋರಿದ ನಿರ್ಲಕ್ಷ್ಯ ದಿಂದ ಇಂದು ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ದೊರಕದ ಸ್ಥಿತಿ ಬಂದಿದೆ. ಇದಕ್ಕೆ ಶಿಕ್ಷಕರೇ ಹೊಣೆ ಎಂದರು.
ಕೊಡಗು ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಒಬ್ಬ ಶಿಕ್ಷಕನಿಗೆ ರಾಜ್ಯಮಟ್ಟದ ಸ್ಥಾನಮಾನ ಸಿಕ್ಕಿರುವುದು ಹೆಮ್ಮೆವಿಚಾರ ವಾಗಿದೆ. ಶಿಕ್ಷಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ನಡೆಸಬೇಕು. ನಿಮ್ಮ ಹೋರಾಟಕ್ಕೆ ಈಗ ಚೇತನ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾಗಿರುವುದು ಆನೆಬಲ ತಂದಿದೆ ಎಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮಾತನಾಡಿ, ಸುಮಾರು 55 ವರ್ಷಗಳ ಇತಿಹಾಸ ಹೊಂದಿರುವ ಶಿಕ್ಷಕರ ಸಂಘದ ಕಾರ್ಯದರ್ಶಿ ಆಗಿ ನೇಮಕವಾಗಿರುವುದು ತುಂಬ ಸಂತಸ ತಂದಿದೆ.ನಮ್ಮ ಸಂಘದಲ್ಲಿ ಒಟ್ಟು 1.85 ಲಕ್ಷ ಸದಸ್ಯರನ್ನು ಹೊಂದಿದೆ.35 ಜಿಲ್ಲೆಗಳ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಒಡನಾಟ ಹೊಂದಿದೆ. ಶಿಕ್ಷಕರು, ನೌಕಕರ ಸಮಸ್ಯೆಗಳಿಗೆ ಸದಾ ಧ್ವನಿಯಾಗಿ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಜಿಲ್ಲೆಯಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಂಘದ ಏಳಿಗೆಗೆ ಶ್ರಮಿಸಲಾಗುವುದು.ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ಸಮಸ್ಯೆಗಳಿಗೆ ಸ್ಪಂದಿಸಿ ಅವರ ವಿವಿಧ ಬೇಡಿಕೆ ಈಡೇರಿಕೆಗೆ ಹೋರಾಟ ನಡೆಸಲಾಗುತ್ತಿದೆ. ಇಂತಹ ಮಹತ್ವದ ಜವಾಬ್ದಾರಿ ದೊರಕಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಹಾಸನ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ, ಕೂಡಿಗೆ ಪಿಯು ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜು ಮತ್ತಿತರರು ಮಾತನಾಡಿ ಶಿಕ್ಷಕ ಚೇತನ್ ಗೆ ಶುಭ ಹಾರೈಸಿದರು.
ಇದೇ ಸಂದರ್ಭ ವಿವಿಧ ಸಂಘಟನೆಗಳಿಂದ ಚೇತನ್ ಅವರನ್ನು ಅಭಿನಂದಿಸಲಾಯಿತು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಘಟಕದ ಜಿಲ್ಲಾಧ್ಯಕ್ಷ ಎಚ್.ಪಿ.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ.ಕುಮಾರ್, ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್, ತಾಲ್ಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಚ್.ಆರ್.ಶ್ರೀನಿವಾಸ್, ಯುವ ಘಟಕದ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ, ನಿರ್ದೇಶಕ ಹೇರೂರು ಚಂದ್ರಶೇಖರ್,
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ, ರಾಜ್ಯ ಉಪಾಧ್ಯಕ್ಷ ಮಂಜುನಾಥ್,
ಅರುಣ್ ಕುಮಾರ್,ರಾಮಚಂದ್ರ,ಶಶಿಧರ್,
ಹನ್ಯಾಳು ಕುಮಾರ್,ಸದಾಶಿವ,
ಅರಕಲಗೂಡು ಕಡುವಿನಹೊಸಳ್ಳಿ ಮೋಹನ್
ಎಂ.ಡಿ.ಕೃಷ್ಣಪ್ಪ,ಸೋಮವಾರಪೇಟೆ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ,ಕೆ.ಆರ್.ನಗರ ಸುರೇಶ್,ಯಶವಂತ,
ಮಾರುತಿ, ಹಾಸನ ಜಿಲ್ಲೆ ನೌಕರರ ಸಂಘದ ಅಧ್ಯಕ್ಷ ಅಣ್ಣೇಗೌಡ,
ಪ್ರಸನ್ನ, ಬಸವರಾಜು,ಮೋಹನ್, ಮಹೇಂದ್ರ,
ಡಿಸಿಐಬಿ ನಿವೃತ್ತ ಅಧಿಕಾರಿ ಅಯ್ಯಪ್ಪ,
ರಮೇಶ್, ಗಿರೀಶ್, ಮೂರ್ತಿ, ಪ್ರಸನ್ನ,
ದೇವರಾಜು ಮತ್ತಿತರರು ಪಾಲ್ಗೊಂಡಿದ್ದರು.
ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಕೆ.ಡಿ.ಮೀನಾಕ್ಷಿ ಪ್ರಾರ್ಥಿಸಿದರು.ತಾಲ್ಲೂಕು ಸಂಘದ ಅಧ್ಯಕ್ಷ ಕೆ.ಟಿ.ಬಸವರಾಜು ಕಾರ್ಯಕ್ರಮ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!