ಕುಶಾಲನಗರ, ಜು 29:ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ .ಎಲ್ .ವಿಶ್ವ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯು ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಭಿವೃದ್ಧಿ ಪೂರಕವಾದ ಚರ್ಚೆಗಳು, ಪ್ರಮುಖವಾಗಿ ಅತಿಯಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ಗ್ರಾಮ ಪಂಚಾಯತಿ ಅನುದಾನವನ್ನು ಬಳಕೆಗೆ ಮಾಡಿಕೊಂಡು ಜೊತೆಯಲ್ಲಿ 15. ನೇ ಹಣಕಾಸು ಯೋಜನೆಯ ಅಡಿಯಲ್ಲಿ ವಿವಿಧ ವಾರ್ಡ್ ಗಳಲ್ಲಿ ಕೈಗೊಳ್ಳಲಾದ ಪ್ರಗತಿ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದವು.
ಸಭೆಯ ಅಧ್ಯಕ್ಷತೆ ವಹಿಸಿದ ಅಧ್ಯಕ್ಷ ಸಿ. ಎಲ್ . ವಿಶ್ವ ಮಾತಾನಾಡಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ, ಎಲ್ಲಾ ಉಪ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದರ ಮುಖೇನ ಗ್ರಾಮದ ಅಭಿವೃದ್ಧಿಗೆ ಕಾರ್ಯೋನ್ಮಖರಾಗಿರುತ್ತೆವೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರ , ಗ್ರಾಮಸ್ಥರ ಸಹಕಾರದೊಂದಿಗೆ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಅಭಿವೃದ್ಧಿ ಅಧಿಕಾರಿ ರಾಜಶೇಖರ ಸಭೆಗೆ ಸರಕಾರದ ಹೊಸ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕುಸುಮ, ಸದಸ್ಯ ಆರ್ .ಕೆ. ಚಂದ್ರು , ಎ.ಎಂ.ಲೋಕನಾಥ . ಸಮೀರ , ಜಾಜಿ,ಮಾವಜಿ ರಕ್ಷಿತ್,ಗಿರಿಜಮ್ಮ, ಕಾರ್ಯದರ್ಶಿ ಶೇಷಗಿರಿ ,ಸಿಬ್ಬಂದಿ ವರ್ಗದವರು ಹಾಜರಿದ್ದರು.
Back to top button
error: Content is protected !!