ಸಭೆ

ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಯುವ ಮೇಳ ನಡೆಸುವಂತೆ ಸೂಚನೆ

ಕುಶಾಲನಗರ ಆ.7: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲ್ಲೂಕು ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮೊದಲಿಗೆ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜೊತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮಖರಾಗಿರುತ್ತಾರೆ ಎಂಬುದರ ಬಗ್ಗೆ  ಚರ್ಚಿಸಲಾಯಿತು.
ನಂತರ ಯುವ ಶಕ್ತಿಯ ಯೋಜನೆಯು ಸಂಪೂರ್ಣವಾಗಿ ತಾಲ್ಲೂಕಿನಲ್ಲಿ ಕಾರ್ಯಗತಗೊಳಿಸಲು ಮತ್ತು ಯುವಕರಿಗೆ ಸಮರ್ಪಕವಾಗಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯರು ಯುವ ಮೇಳವನ್ನು ಮುಂದಿನ ದಿನಗಳಲ್ಲಿ ಆಯೋಜಿಸುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗೆ ಸೂಚನೆ ನೀಡಿದರು.

ನಂತರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಣೆಯಾದ ಪಡಿತರ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಖರೀದಿಸುತ್ತಿದ್ದ ಸಂದರ್ಭದಲ್ಲಿ ಪಡಿತರ ವಸ್ತುಗಳನ್ನು ವಶ ಪಡೆದುಕೊಂಡು ಕಾನೂನು ಕ್ರಮ ತೆಗೆದುಕೊಂಡ ಆಹಾರ ಇಲಾಖೆಯ ತಾಲ್ಲೂಕು ಅಹಾರ ಪರಿವೀಕ್ಷಣಾ ಅಧಿಕಾರಿ ಸ್ವಾತಿ ಎಂ.ಎಸ್. ಅವರ ಕಾರ್ಯ ವೈಖರಿ ಯನ್ನು ಗುರುತಿಸಿ ಸಭೆಯು ಶ್ಲಾಘನೆ ಜೊತೆಗೆ ಅಧಿಕಾರಿ ಸ್ವಾತಿಗೆ ಗೌರವ ಸಮರ್ಪಣೆ ಮಾಡಿದರು.

ಈಗಾಗಲೇ ಚೆಸ್ಕಾಂ ವತಿಯಿಂದ ನಡೆಯುತ್ತಿರುವ ನೂತನ ಕಂಬಗಳ ಅಳವಡಿಕೆ ಮತ್ತು ಬದಲಿ ವೈರಲ್ ಅಳವಡಿಕೆ ಕಾರ್ಯ ಸಮರ್ಪಕವಾಗಿ ರಸ್ತೆಯ ಹದ್ದಬಸ್ತು ಅನ್ನು ಬಿಟ್ಟು ಅಳವಡಿಕೆ ಮಾಡವ ಕಾರ್ಯವು ನಡೆಯಬೇಕಾಗಿದೆ ಎಂದು  ಅಧಿಕಾರಿಗೆ ಸೂಚನೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ ವಿ.ಪಿ.ಶಶಿಧರ್ ಮಾತನಾಡಿ,ಸರಕಾರದ ಗ್ಯಾರೆಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇ ಗೌಡ, ಹೆಚ್ . ಎನ್ . ರಾಜಶೇಖರ್, ಶ್ರೀನಿವಾಸನ್ ,ಕುಮಾರ್, ಅಬ್ದುಲ್ ರಜಾಕ್, ರಫೀಕ್ ಖಾನ್‌ , ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ವರ್ಗದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!