ಕುಶಾಲನಗರ, ಸೆ 10 :ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ,ಮಡಿಕೇರಿ ವತಿಯಿಂದ ಬುಧವಾರ ಇಲ್ಲಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಸಲಾಯಿತು.
ಲೋಕಾಯುಕ್ತ ಉಪ ಅಧೀಕ್ಷಕ ದಿನಕರ್ ಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಕಾನೂನು ಬಾಹಿರವಾದ ಕೆಲಸ ಮಾಡಬೇಡಿ.ಇದರಿಂದ ತಪ್ಪಿಸಿಕೊಳ್ಳಲು
ಸಾಧ್ಯವಿಲ್ಲ ಎಚ್ಚರಿಕೆ ನೀಡಿದರು. ಪ್ರತಿ ಕಚೇರಿಯಲ್ಲೂ ಮುಂಭಾಗದಲ್ಲಿ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ
ಲೋಕಾಯುಕ್ತ ಫಲಕವನ್ನು ಕಡ್ಡಾಯವಾಗಿ ಹಾಕಬೇಕು ಸೂಚನೆ ನೀಡಿದರು.ಬಹುತೇಕ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಸಿಗೋದಿಲ್ಲ ಎಂಬ ದೂರು ಕೇಳಿ ಬರುತ್ತಿವೆ. ಯಾವುದೇ ಅಧಿಕಾರಿಗಳು ಮೂಮೆಂಟ್ ರಿಜಿಸ್ಟರ್ ಗೆ ಸರಿಯಾಗಿ ನಮೋದಿಸುತ್ತಿಲ್ಲ.ಕೆಲವು ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದರೂ
ಹಾಜರಾತಿ ಪುಸ್ತಕಕ್ಕೆ ಸಹಿ ಹಾಕುತ್ತಿಲ್ಲ ಎಂದು ಹೇಳಿದರು. ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಆಲಿಸಬೇಕು.ಅವರ ಕೆಲಸಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಕೊಡಬೇಕು ಎಂದು ತಿಳಿಸಿದರು.
ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊರಾರ್ಜಿ ಮತ್ತು ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸರ್ಕಾರದ ವತಿಯಿಂದ ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದರು.
ಕೂಡಿಗೆ ಮೊರಾರ್ಜಿ ಶಾಲೆಯಲ್ಲಿ ನೀರಿಗೆ ಮೆಣಸಿನಕಾಯಿ ಪುಡಿ ಹಾಕಿ ಸಂಬಾರು ಮಾಡಿ ಮಕ್ಕಳಿಗೆ ನೀಡುತ್ತಿದ್ದರು.ಸ್ಟೋರ್ ರೂಮ್ ನಲ್ಲಿ ಗೋಡಂಬಿ,ಎಣ್ಣಿ ಹಾಗೂ ತರಕಾರಿ ಇದ್ದರೂ ಅವುಗಳನ್ನು ಸರಿಯಾಗಿ ಬಳಸದೆ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ನೀಡುತ್ತಿರುವುದು ನಾವು ಭೇಟಿ ನೀಡಿ ಪರಿಶೀಲನೆ ವೇಳೆ ತಿಳಿದು ಬಂದಿದೆ ಅಧಿಕಾರಿಗಳು ಏನು ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು.ಅದೇ ರೀತಿ
ಮಾಲಾಂಬಿ ಗಿರಿಜನ ವಸತಿ ಶಾಲೆಯ ಮಕ್ಕಳ ಸ್ಥಿತಿ ಶೋಚನೀಯವಾಗಿದೆ.ಮಕ್ಕಳಿಗೆ ಸರ್ಕಾರಿ ಸೌಲಭ್ಯ ನೀಡುತ್ತಿಲ್ಲ.
ಅಕ್ಮಿ, ಆಹಾರ ಪದಾರ್ಥಗಳು ಗುಣಮಟ್ಟದಿಂದ ಇರೋದಿಲ್ಲ. ಈ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಕೇಶ್ ಕುಮಾರ್ ಮಾತನಾಡಿ, ತಾಲ್ಲೂಕು ವ್ಯಾಪ್ತಿಯಲ್ಲಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.ಗೃಹಪ್ರವೇಶ,ಮದುವೆ ಸಮಾರಂಭಗಳಿಗೆ ಹಾಗೂ ವೈಯಕ್ತಿಕ ಕಾರ್ಯಗಳಿಗೆ ಬಳಕೆ ಮಾಡಬೇಡಿ.ಸಕಾಲ ಅರ್ಜಿ ವಿಲೇವಾರಿ ಮಾಡದೆ ಇಟ್ಟು ಕೊಳ್ಳ ಬೇಡ ಎಂದು ಸಲಹೆ ನೀಡಿದರು.
ಈ ಸಂದರ್ಭ ತಹಶೀಲ್ದಾರ್ ಕಿರಣ್ ಗೌರಯ್ಯ, ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀಣಾ ನಾಯಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.ಇದೇ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಹಾಗೂ ಕುಂದುಕೊರತೆಯನ್ನು ಆಲಿಸಿದರು.
Back to top button
error: Content is protected !!