ಕುಶಾಲನಗರ, ಸೆ 20:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಸಮೀಕ್ಷೆಯು ದಿನಾಂಕ:22/09/2025 ರಿಂದ 07/10/2025 ರವರೆಗೆ ನಡೆಯಲಿದ್ದು ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ, ಸದ್ರಿ ಸಮೀಕ್ಷೆಗೆ ಈ ಕೆಳಗಿನ ದಾಖಲೆಗಳ ಅವಶ್ಯಕತೆ ಇರುತ್ತದೆ. ಕಾರಣ ಎಲ್ಲಾ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ಈ ಕೆಳಕಂಡ ದಾಖಲೆಗಳನ್ನು ತೆಗೆದಿರಿಸಿಕೊಂಡು ಸಮೀಕ್ಷೆಗೆ ಸಹಕರಿಸಲು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಪ್ರಕಟಣೆ ಮೂಲಕ ಕೋರಿದ್ದಾರೆ.
ದಾಖಲಾತಿಗಳು:
1. ರೇಷನ್ ಕಾರ್ಡ್
2. ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ ಆಧಾರ್ ಕಾರ್ಡ್ ಗೆ ಲಿಂಕ್ ಇಲ್ಲದಿದ್ದರೆ ಇಂದೇ ಸಮೀಪದ ಆಧಾರ್ ಕೇಂದ್ರಕ್ಕೆ ಅಥವಾ ಹತ್ತಿರದ ಅಂಚೆ ಕಛೇರಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿಕೊಳ್ಳುವುದು
3. ಚುನಾವಣಾ ಗುರುತಿನ ಚೀಟಿ
4. ವಿಕಲ ಚೇತನರಾಗಿದ್ದರೆ UID ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರ
Back to top button
error: Content is protected !!