ಕುಶಾಲನಗರ, ಸೆ 27: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮಕ್ಕಳು ಸೇರಿದಂತೆ ಈವರೆಗೆ 33 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದಾಗಿ ನಟ-ರಾಜಕಾರಣಿಯೊಬ್ಬರು ತಮ್ಮ ಭಾಷಣವನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಪ್ರಚಾರ ವಾಹನದ ಬಳಿಯಲ್ಲಿಯೇ ಇದ್ದ ಗುಂಡಿಗೆ ಬಿದ್ದ ಹಿನ್ನೆಲೆಯಲ್ಲಿ ನೂಕುನುಗ್ಗಲು ಏರ್ಪಟ್ಟು ದುರಂತ ಸಂಭವಿಸಿರುವ ಬಗ್ಗೆ ಪ್ರತ್ಯಕ್ಷದರ್ಶಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
Back to top button
error: Content is protected !!