ಪ್ರತಿಭೆ

ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಶಾಲನಗರ ನ 06: ಕುಶಾಲನಗರದ ಯೂನಿಕ್ ಅಕಾಡೆಮಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಿಶೃತ್ ವರದರಾಜ್ 14 ವರ್ಷ ಒಳಗಿನ, 25 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಇತ್ತೀಚೆಗೆ ದಾವಣಗೆರೆಯ ಅಲ್-ಫತಹ್ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಶೃತ್ ವರದರಾಜ್ ಭಾಗವಹಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ತಂದೆ ವರದರಾಜ್ ಪತ್ರಿಕೆಗೆ ತಿಳಿಸಿದ್ದಾರೆ. ಡಿಸೆಂಬರ್ 15ನೇ ತಾರೀಖು ಮಧ್ಯಪ್ರದೇಶದಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆ ನಡೆಯಲಿದೆ.
ಕುಶಾಲನಗರದ ಕರಾಟೆ ಶಿಕ್ಷಕ ಸಂಕೇತ್ ಅವರಲ್ಲಿ ಕಳೆದ 6 ವರ್ಷಗಳಿಂದ ಕರಿಯಪ್ಪ ಬಡಾವಣೆಯಲ್ಲಿ ಅಭ್ಯಾಸ ಮಾಡುತ್ತಿದ್ದಾನೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!