ಕುಶಾಲನಗರ, ನ 14: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2025ರ ಅಂಗವಾಗಿ ದಿನಾಂಕ 14- 11- 2025 ರಿಂದ 20-11-2025ರ ವರೆಗೆ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ಕುಶಾಲನಗರ ಶಾಖಾ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು. ಸಾಹಿತ್ಯ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ , ಮಹನೀಯರ ಜೀವನ ಚರಿತ್ರೆ, ಮಕ್ಕಳ ಪುಸ್ತಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಒಂದು ವಾರಗಳ ಕಾಲ ಪುಸ್ತಕ ಪ್ರದರ್ಶನವು ಸಾರ್ವಜನಿಕರಿಗೆ ಲಭ್ಯವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕೆಂದು ಕೋರಲಾಗಿದೆ.
Back to top button
error: Content is protected !!