ಕ್ರೈಂ

ಬಸ್ ಗೆ ಕಾದು ನಿಂತಿದ್ದ ಮಹಿಳೆ ಕೈಯಿಂದ ಮೊಬೈಲ್ ಕಸಿದು ಪರಾರಿ: ಇಬ್ಬರ‌ ಬಂಧನ

ಕುಶಾಲನಗರ, ನ 17: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪುಲಿಯೇರಿ ಗ್ರಾಮದ ನಿವಾಸಿ ಶೈನಿಡಿ ರವರು ದಿನಾಂಕ: 15-11-2025 ರಂದು ಸಮಯ ಅಂದಾಜು 05.00 ಘಂಟೆಯಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್‌ನ ಸಮೀಪದ ಜಂಕ್ಷನ್‌ನ ಬಸ್ ತಂಗುದಾಣದಲ್ಲಿ ತಮ್ಮ ಮಕ್ಕಳೊಂದಿಗೆ ಬಸ್‌ಗಾಗಿ ಕಾಯುತ್ತಾ ನಿಂತಿರುವಾಗ ಕೈನಲ್ಲಿದ್ದ ಮೊಬೈಲ್ ಅನ್ನು ಕಸಿದುಕೊಂಡು ಪರಾರಿಯಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಲಂ: 304(2) ಬಿಎನ್ ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಗಳ ಪತ್ತೆಗಾಗಿ  ಸೂರಜ್.ಪಿ.ಎ, ಡಿಎಸ್‌ಪಿ, ಮಡಿಕೇರಿ ಉಪವಿಭಾಗ,  ರಾಜು.ಪಿ.ಕೆ, ಸಿಪಿಐ, ಮಡಿಕೇರಿ ನಗರ ವೃತ್ತ,  ಮಂಜುನಾಥ್ ಈ, ಪಿಎಸ್‌ಐ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಠಾಣಾ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂಗಳು ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 17-11-2025 ರಂದು ಘಟ್ಟದಹಳ್ಳ ಗ್ರಾಮದ ನಿವಾಸಿಗಳಾದ  ಪಂಜರಿವಿರವರ ಸಿದ್ದಯ್ಯ, (20 ವರ್ಷ) ಮತ್ತು ಪಂಜರಿವಿರವರ ಮಾದಪ್ಪ, (26 ವರ್ಷ) ಎಂಬುವವರನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಕಳ್ಳತನವಾಗಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!