ಕುಶಾಲನಗರ, ನ 27: ಕುಶಾಲನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನವೀನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಸಂವಿಧಾನ ದಿನಾಚರಣೆ ನಡೆಯಿತು.
ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪರಶಿವಮೂರ್ತಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪುಟ್ಟಸ್ವಾಮಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಾಂತಿ,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮತ್ತು ಉಪನ್ಯಾಸಕ ರಾಜು, ಬಸವನಹಳ್ಳಿ ಆಶ್ರಮ ಶಾಲೆ ಮುಖ್ಯ ಶಿಕ್ಷಕ ರವಿಯವರು, ನಿಲಯದ ವಾರ್ಡನ್ ಮಧು ಮತ್ತು ಇತರೆ ಗಣ್ಯರು ಹಾಜರಿದ್ದರು.
Back to top button
error: Content is protected !!