ಕುಶಾಲನಗರ, ಆ 19:
ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ವಿರುದ್ದ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಹುಣಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುರುವಾರ ಸಂಜೆ ನಗರದ ಬೈಪಾಸ್ ರಸ್ತೆಯ ಮೈಸೂರು-ಮಂಗಳೂರು ಹೆದ್ದಾರಿಯ ಕಲ್ಕುಣಿಕೆ ವೃತ್ತದಲ್ಲಿ ಧರಣಿ ಕುಳಿತ ಕಾರ್ಯಕರ್ತರು ರಾಜ್ಯದ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಗೃಹಮಂತ್ರಿ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಧಿಕ್ಕಾರ ಮೊಳಗಿಸಿ. ರಸ್ತೆಯಲ್ಲಿ ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಬಂದಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಹಾನಿಗೀಡಾದ ಪ್ರದೇಶಗಳ ವೀಕ್ಷಣೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರು ತೆರಳಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಲ್ಲದೆ ಕಾರಿಗೆ ಮೊಟ್ಟೆ ಎಸೆದು ಪುಂಡತನ ಮೆರೆದಿದ್ದು, ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಮುಖಂಡರಾದ ಬಿಳಿಕೆರೆ ಮಧು, ರವಿಪ್ರಸನ್ನ, ನಿಂಗರಾಜ್, ಕಲ್ಕುಣಿಕೆರಾಘು, ಮಂಡ್ಯ ಮಹೇಶ್ ಸೇರಿದಂತೆ ಅನೇಕರಿದ್ದರು.
Back to top button
error: Content is protected !!