ಆರೋಗ್ಯ

ಹೆಬ್ಬಾಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

ಕುಶಾಲನಗರ, ಡಿ. 21: ಹೆಬ್ಬಾಲೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕಾರ್ಯಕರ್ತರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಸಭಾಂಗಣದಲ್ಲಿ ಕಾಂಗ್ರೆಸ್ ಮುಖಂಡ , ರಾಜ್ಯ ಐ .ಎನ್ . ಟಿ‌.ಸಿ .ನ ಅಧ್ಯಕ್ಷ, ಸಮಾಜ ಸೇವಕರಾದ ನಾಪಂಡ ಮುತ್ತಪ್ಪರವರು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಮಗುವಿಗೆ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಭವಿಷ್ಯದ ಅಂಗ ವೈಫಲ್ಯದಿಂದ ಪಾರಾಗಬಹುದು ,ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.
ಜಗತ್ತಿನಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದೇ ಈ. ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ
ಪ್ರತಿವರ್ಷ ಕುಶಾಲನಗರ ಹಾಗೂ ಸುತ್ತಮುತ್ತಲಿನ ಎಲ್ಲಾ ಸಾರ್ವಜನಿಕ ಸ್ಥಳಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ,ಸಾರ್ವಜನಿಕರ ಸಹಕಾರದೊಂದಿಗೆ ಪೋಲಿಯೋ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದರು. ಈ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಎಲ್ಲರೂ ಭಾಗವಹಿಸುವುದು ಬಹು ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡ ತ್ರಿನೇಶ್, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣ ಕುಮಾರಿ, ಸದಸ್ಯ ಮಂಜುನಾಥ, ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಾ ಸಮಿತಿ ಸದಸ್ಯ ರವಿ, ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಯರು,ಸೇರಿದಂತೆ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!