ಕಾಮಗಾರಿ

ನಿಂಗೇಗೌಡ ಬಡಾವಣೆಯಲ್ಲಿ 180 ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಚಾಲನೆ

ಕುಶಾಲನಗರ, ಡಿ 23: ಕುಶಾಲನಗರ ಪುರಸಭೆ ವ್ಯಾಪ್ತಿಯ ನಿಂಗೇಗೌಡ ಬಡಾವಣೆಯಲ್ಲಿ 180 ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಚಾಲನೆ ದೊರೆತಿದೆ. ಕಳೆದ 7 ವರ್ಷಗಳಿಂದ ಹದಗೆಟ್ಟಿದ್ದ ರಸ್ತೆ ಅವ್ಯವಸ್ಥೆ ಕುರಿತು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಭ್ರಷ್ಟಾಚಾರ ನಿಗ್ರಹ ದಳ, ಕೊಡಗು ಅಭಿವೃದ್ಧಿ ಸಮಿತಿ ಕೂಡ ರಸ್ತೆ ಅವ್ಯವಸ್ಥೆ ಬಗ್ಗೆ ದನಿ ಎತ್ತಿದ್ದರು. ಈ ಹಿನ್ನೆಲೆಯಲ್ಲಿ  ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಸಿ.ಎಂ. ಅಜೀಜ್ ಮತ್ತು ಸಂಗಡಿಗರು ಸ್ಥಳೀಯರ ಅಹವಾಲು ಆಲಿಸಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಕಾಂಗ್ರೆಸ್ ಹಿರಿಯ ಮುಖಂಡರ ಸಹಕಾರ ಪಡೆದ ಅಜೀಜ್ ಅವರು ರಸ್ತೆ ಅಭಿವೃದ್ಧಿಗೆ ಪುರಸಭೆ ಮೂಲಕ ಕ್ರಮಕೈಗೊಂಡ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಸ್ಥಳಕ್ಕೆ ಭೇಟಿ ನೀಡಿದ ಅಜೀಜ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಬ್ದುಲ್ ಎಂ.ಎಂ, ತಲಾತ್, ವಕೀಲೆ ವೈಶಾಲಿ,‌ಲತೀಫ್ ಮತ್ತಿತರರು ರಸ್ತೆ ದುರಸ್ಥಿ ಕಾಮಗಾರಿಗೆ ಪರಿಶೀಲನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!