ಕುಶಾಲನಗರ, ಡಿ 30: ಸಣ್ಣ ನೀರಾವರಿ ಇಲಾಖೆ ವತಿಯಿಂದ ಗುಡ್ಡೆಹೊಸೂರು-ತೆಪ್ಪದಕಂಡಿ ಬಳಿ ತೋಡಿಗೆ ರೂ 1.65 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.