ಟ್ರೆಂಡಿಂಗ್

ಕುಶಾಲನಗರ ವ್ಯಾಪ್ತಿಯ ವಿವಿಧೆಡೆ 7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ

ಕುಶಾಲನಗರ, ಡಿ 30:ಕುಶಾಲನಗರ ವ್ಯಾಪ್ತಿಯ ವಿವಿಧೆಡೆ 7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು.
ಮಾದಾಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರೂ 25 ಲಕ್ಷ ವೆಚ್ಚದಲ್ಲಿ ಪ.ಜಾತಿ ಕಾಲನಿಯ 350 ಮೀ ರಸ್ತೆ ಅಭಿವೃದ್ಧಿ ಕಾಮಗಾರಿ, ಸಣ್ಣ ನೀರಾವರಿ ಇಲಾಖೆ ವತಿಯಿಂದ ಗುಡ್ಡೆಹೊಸೂರು-ತೆಪ್ಪದಕಂಡಿ ಬಳಿ ತೋಡಿಗೆ ರೂ 1.65 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ನಿರ್ಮಾಣಕ್ಕೆ ಅವರು ಭೂಮಿಪೂಜೆ ನೆರವೇರಿಸಿದರು.
ನಂಜರಾಯಪಟ್ಟಣದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ 514 ಲಕ್ಷ ವೆಚ್ಚದಲ್ಲಿ ಮೆಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ ವಸತಿ ನಿಲಯ, ಮೈದಾನ ನಿರ್ಮಾಣ ಕಾಮಗಾರಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.

ಇದೇ ಸಂದರ್ಭ ಕುಶಾಲನಗರ ಪುರಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೊಳವೆ ಬಾವಿ ಕೊರೆಸಲು ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ‌ ಮಾಡಿದರು.
ವಿದ್ಯಾರ್ಥಿಗಳು ಸರಕಾರ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉನ್ನತಿ ಹೊಂದಬೇಕಿದೆ. ಎಲ್ಲಾ ವರ್ಗದವರ ಸಮಗ್ರ ಅಭಿವೃದ್ಧಿ, ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ. ಮುಂದೆಯೂ ಕೂಡ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಗ್ರಾಮಸ್ಥರು ಕಾಮಗಾರಿ ವೇಳೆ ತಮ್ಮ‌ ಜವಬ್ದಾರಿ ನಿರ್ವಹಿಸಿ ಗುಣಮಟ್ಟದ ಕಾಮಗಾರಿ ಬಗ್ಗೆ ಗಮನಹರಿಸಬೇಕಿದೆ. ಗ್ಯಾರೆಂಟಿ ಯೋಜನೆಗಳಿಗೂ ಅಭಿವೃದ್ಧಿಗೆ ಕಾಮಗಾರಿಗಳಿಗೂ ನಾವು ಅನುದಾನ ಒದಗಿಸುತ್ತಿದ್ದೇವೆ ಎಂದರು.
ಶೀಘ್ರದಲ್ಲೇ ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭ
ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಮಾಜಿ ಸದಸ್ಯೆ ಸುನಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ವರ್ಗ, ಆಯಾ ಗ್ರಾಮಗಳ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರುಗಳು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!