ಕ್ರೈಂ

ಮಾದಕ ವಸ್ತು ಸೇವನೆ, ಸರಬರಾಜು ಪ್ರಕರಣ: ಆರೋಪಿಗಳ ಬಂಧನ

ಕುಶಾಲನಗರ, ಡಿ 30:ಡಿಸೆಂಬರ್-2025 ನೇ ತಿಂಗಳಿನಲ್ಲಿ ಜಿಲ್ಲೆ/ ಹೊರಜಿಲ್ಲೆ/ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ/ ಸರಬರಾಜು/ಬಳಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತ ಕ್ರಮವಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಸುಂಟಿಕೊಪ್ಪ, ಕುಶಾಲನಗರ ಟೌನ್ & ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸರಬರಾಜು ಮಾಡಿರುವ ಕುರಿತು 03 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಒಟ್ಟು 05 ಆರೋಪಿಗಳನ್ನು ದಸ್ತಗಿರಿ ಮಾಡಿ, ಒಟ್ಟು 16.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ ಮಾದಕ ವಸ್ತು ಬಳಕೆ/ಸೇವನೆ ಮಾಡಿರುವ ಕುರಿತು ಸುಂಟಿಕೊಪ್ಪ, ಕುಶಾಲನಗರ ಟೌನ್ & ಗ್ರಾಮಾಂತರ ಪೊಲೀಸ್ ತಾಣೆಯಲ್ಲಿ 16 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ 5 ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಬಂಧಿತ ಆರೋಪಿಗಳ ವಿವರ:

1. ತೌಶಿದ್ ಎಸ್.ಎಂ. 24 ವರ್ಷ, ಕೆಇಬಿ ಹತ್ತಿರ, ಸುಂಟಿಕೊಪ್ಪ,

2. ನೌಶದ್ ಎಸ್.ಎಂ. 23 ವರ್ಷ, ಕೆಇಬಿ ಹತ್ತಿರ ಸುಂಟಿಕೊಪ್ಪ,

3. ಆಫ್ಘಾನ್, 25 ವರ್ಷ, ಶ್ರೀರಾಮ್ ಕಾಲೋನಿ, ಸುಂಟಿಕೊಪ್ಪ,

4. ಕ್ಸೇವಿಯರ್ ಕೆ.ಸಿ. 40 ವರ್ಷ, ವಿದ್ಯಾರಣ್ಯಪುರಂ, ಮೈಸೂರು

5. ನೌಶೀಫ್, 23 ವರ್ಷ, ಗುಮ್ಮನಕೊಲ್ಲಿ ಗ್ರಾಮ, ಕುಶಾಲನಗರ.

ದಿನಾಂಕ: 30-12-2025 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026 ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಿ & ಮಾದಕ ವಸ್ತುಗಳ ಸರಬರಾಜು/ಬಳಕೆ ಮಾಡುವುದು ಸಾಧ್ಯತೆ ಇರುವುದರಿಂದ ಮುಂಜಾಗ್ರತವಾಗಿ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ 02 ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಸದರಿ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು, ಸದರಿ ಆರೋಪಿಗಳ ಮೇಲೆ ಮಾದಕ ವಸ್ತು ಬಳಕೆ/ಸೇವನೆ ಮಾಡಿರುವ ಕುರಿತು ಪ್ರಕರಣಗಳನ್ನು ದಾಖಲಿಸಿ 02 ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಟ/ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಕಲಂ: 25 ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.

2026 a ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ/ ಹೊರಜಿಲ್ಲೆ/ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!