ಕುಶಾಲನಗರ, ಜ 03:ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿದ್ಧೋದ್ದೇಶ ಸಹಕಾರ ಸಂಘದಿಂದ ಸಮುದಾಯಿಕ ಪ್ರಯೋಜನ ವಿದ್ಯಾಯೋಜನೆ ( ಐಪಿ ಎಂಸಿ ಎಸ್) ಅಡಿಯಲ್ಲಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಅನ್ನು ಶಾಸಕ ಡಾ.ಮಂತರ್ ಗೌಡ ಲೋಕಾರ್ಪಣೆ ಮಾಡಿದರು.
ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿದ್ಧೋದ್ದೇಶ ಸಹಕಾರ
ಸಂಘದ ಅಧ್ಯಕ್ಷ ಟಿ. ಆರ್. ಶರವಣ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಎನ್.ರಾಜೇಂದ್ರ ಸೇರಿದಂತೆ
ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು ಇದ್ದರು.
Back to top button
error: Content is protected !!