ಕಾಮಗಾರಿ

ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಓತ್ತೊರ್ಮೆ ಕೂಟ

ಕುಶಾಲನಗರ, ಜ 05: ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಒತ್ತೋರ್ಮೆ ಕೂಡ ಸಮಾಜದ ಅದ್ಯಕ್ಷ ವಾಂಚೀರ ಮನು ನಂಜುಂಡ ಅವರ ಅದ್ಯಕ್ಷತೆಯಲ್ಲಿ ಸಮಾಜದಲ್ಲಿ ನಡೆಯಿತು.

ಮುಖ್ಯಅಥಿತಿಯಾಗಿ ಮಡಿಕೇರಿ ಕ್ಷೇತ್ರ ಶಾಸಕ ಡಾ॥ ಮಂತರ್ ಗೌಡ ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಡ ಎಂ. ಮೊಟಯ್ಯ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಸಮಾಜದ ಬೆಳವಣಿಗೆಗೆ ಎಲ್ಲರೂ ಶ್ರಮವಹಿಸಬೇಕಿದೆ. ಆಗ ಮಾತ್ರ ಸಮಾಜ ಬೆಳೆಯಲು ಸಾಧ್ಯ. ಮಕ್ಕಳಿಗೆ ಹಿರಿಯರು ತಮ್ಮ ಸಂಸ್ಕ್ರತಿ ಹೇಳಿ ಕೊಡಬೇಕು ಎಂದು ಕಿವಿ ಮಾತು ಹೇಳಿದರು. ಸಮಾಜದ ಅಬಿವೃದ್ದಿಗೆ 20 ಲಕ್ಷ ಅನುದಾನ ಒದಗಿಸುವ ಭರವಸೆ ನೀಡಿದರು.

ಕಾಳಿಮಡ ಮೊಟಯ್ಯ ಅವರು, ಮಾತನಾಡಿ ನಮ್ಮ ಜನಾಂಗ ಆಚಾರ ವಿಚಾರವನ್ನು ಬೆಳೆಸಿಕೊಳ್ಳಬೇಕು, ಮಕ್ಕಳಿಗೆ ತಿಳಿಸಿಕೊಡಬೇಕು. ತಿಳಿಸಿಕೊಡುವ ಭರದಲ್ಲಿ ತಪ್ಪಾಗಬಾರದು. ಒಂದು ಸಾರಿ ತಪ್ಪಾದರೆ ಅದು ಪುನಾರವರ್ತನೆ ಆಗುತ್ತೆ ಅದಕ್ಕೆ ಅವಕಾಶ ಕೊಡಬಾರದೆಂದು ಹೇಳಿದರು.

ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ ಮಾತನಾಡಿ, ನಮ್ಮ ಸಮಾಜದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಎಲ್ಲರ ಸಹಕಾರ, ಮತ್ತು ಒಗ್ಗಟ್ಟು ಅಗತ್ತ. ತಮ್ಮ ಆಸ್ತಿಯನ್ನು ಪರಬಾರೆ ಮಾಡಬೇಡಿ. ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸಿ ನಾಡಿನ ಉತ್ತಮ ಪ್ರಜೆಯಾಗಿ ರೂಪಿಸಿ ಎಂದು ಹೇಳಿದರು.
ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಾದನೆ ಮಾಡಿದ ಸಮಾಜದ ಸದಸ್ಯರು ಮತ್ತು ಮಕ್ಕಳಿಗೆ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ, ಸಮಾಜದ ಕಾರ್ಯದರ್ಶಿ ಅಯಿಲಪಂಡ ಸಂಜು ಬೆಳ್ಳಿಯಪ್ಪ ಇದ್ದರು. ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related Articles

Leave a Reply

Your email address will not be published. Required fields are marked *

Back to top button
error: Content is protected !!