ಕುಶಾಲನಗರ, ಜ 08: ಜನವರಿ 26 ರಂದು ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಕುಶಾಲನಗರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ನಡೆಯಿತು. ಕುಶಾಲನಗರ ತಾಲೂಕು ತಹಸೀಲ್ದಾರ್ ಆದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಕಿರಣ್ ಜಿ ಗೌರಯ್ಯ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಸದಸ್ಯರೊಂದಿಗೆ ಚರ್ಚೆ ನಡೆಯಿತು.
ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ವನ್ನು ಯಶಸ್ವಿಯಾಗಿ ಆಚರಿಸಲು ಎಲ್ಲಾ ಸಂಘಸಂಸ್ಥೆ, ಸಂಘಟನೆಗಳ ಸಹಕಾರ ಅಗತ್ಯವಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಲು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮನವಿ ಮಾಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಾಧಕರಿಗೆ, ಹೋರಾಟಗಾರರಿಗೆ ಸನ್ಮಾನಿಸುವ ಕುರಿತಾದ ಸಲಹೆ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಹಿರಿಯ ನಾಗರಿಕ ಫಜಲುಲ್ಲಾ ಸೇರಿದಂತೆ ಅಧಿಕಾರಿ ವರ್ಗ, ವಿವಿಧ ಇಲಾಖೆಗಳ ಪ್ರತಿನಿಧಿಗಳ ಇದ್ದರು.
Back to top button
error: Content is protected !!