ಕಾರ್ಯಕ್ರಮ

ಮಾದಾಪಟ್ಟಣ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಕುಶಾಲನಗರ, ಜ 13: ಕೊಡಗು ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ‌ ಮಾದಾಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜು

ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಅಂಗವಾಗಿ ಅರಿವು ಮೂಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಸ್ಪಿ ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ರಸ್ತೆ ಸಂಚಾರಿ ನಿಯಮಗಳ ಕಡ್ಡಾಯ ಪಾಲನೆ ಬಗ್ಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪ್ರದೀಪ್ ಸಾರಿಗೆ ನಿರೀಕ್ಷಕ ಪ್ರದೀಪ್, ಕಾನೂನು ಸೇವಾ ಪ್ರಾಧಿಕಾರದ ಮಂಜುಳ, ಪುಷ್ಪಲತಾ, ಕಾಲೇಜು ಪ್ರಭಾರ ಪ್ರಾಂಶುಪಾಲೆ ಆಶಾ ಕಾಮತ್, ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳಾದ ಗಣೇಶ್, ಶ್ರೀನಿವಾಸ, ಹಾಗೂ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿಗಳು, ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!