ಸುದ್ದಿಗೋಷ್ಠಿ

ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ವತಿಯಿಂದ ಕರೋಕೆ ಗಾಯನ ಕಾರ್ಯಕ್ರಮ

ಕುಶಾಲನಗರ, ಜ 16: ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ವತಿಯಿಂದ ಜನವರಿ 25 ರಂದು ಕುಶಾಲನಗರದಲ್ಲಿ ಕರೋಕೆ ಗಾಯನ ಸ್ವರ ಸಂಭ್ರಮ ಸೀಸನ್-1 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಡಾ.ನಯನ ಹರಿಶ್ಚಂದ್ರ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಹಾರಂಗಿ ರಸ್ತೆಯ ವಾಲ್ಮೀಕಿ‌ ಭವನದಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಕಾರ್ಯಕ್ರಮ ನಡೆಯಲಿದೆ. ಈಗಾಗಲೆ ವಿವಿಧೆಡೆಗಳಿಂದ 25 ಕ್ಕೂ ಅಧಿಕ ಮಂದಿ ನೊಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕಾನೂನು ಸಲಹೆಗಾರ ಚಂದ್ರಶೇಖರ್ ಕೆ.ಎಸ್, ನಿವೃತ್ತ ಭೂಮಾಪಕ ಅಧಿಕಾರಿ ಹರೀಶ್ ಚಂದ್ರ ಬಿದ್ರುಪಣೆ, ಉದ್ಯಮಿಗಳಾದ ಬಿ.ಜಿ.ರಾಜೇಶ್, ರಾಬಿನ್ ಪೀಟರ್, ಕಾಫಿ ಪ್ಲಾಂಟರ್ ಪೋತಂಡ್ರ ತೇಜಪ್ರಸಾದ್, ಅಭಿಯಂತರ ಯೂಸಫ್ ಟಿ.ಎ. ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯದರ್ಶಿ ಹರಿಣಿ ಪ್ರಭಾಕರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪರಿಷತ್ ವತಿಯಿಂದ ಈ ಹಿಂದೆ ಸೌಂದರ್ಯ ಸ್ಪರ್ಧೆ ನಡೆಸಲಾಗಿತ್ತು. ಪ್ರಥಮವಾಗಿ ಕರೋಕೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪರಿಷತ್ತಿನ ಮೈಸೂರು ಜಿಲ್ಲಾಧ್ಯಕ್ಷೆ ಮೌಲ್ಯ ಜಯ ಕುಮಾರ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಹಾಡುಗಾರರು, ಸಂಗೀತ ಪ್ರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡರು. ಹೆಚ್ಚಿನ‌ ಮಾಹಿತಿಗೆ 9448201227, 9342845120, 8867688676 ಸಂಪರ್ಕಿಸಲು ಕೋರಿದ್ದಾರೆ.
ಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಕಾರ್ಯದರ್ಶಿ ರಂಜನಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!