ಕುಶಾಲನಗರ, ಜ 19:ಬೀದಿ ಬದಿ ವ್ಯಾಪಾರಿಗಳು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಹೇಳಿದರು. ಕುಶಾಲನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿವ್ಯಾಪಾರಿಗಳ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು ಹಲವಾರು ಸಮಸ್ಯೆಗಳನ್ನು ಬೀದಿಬದಿ ವ್ಯಾಪಾರಿಗಳು ಅನುಭವಿಸುತ್ತಿದ್ದಾರೆ ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬೀದಿಬದಿ ವ್ಯಾಪಾರಿಗಳ ಘಟಕವನ್ನು ಸ್ಥಾಪಿಸುವ ಮೂಲಕ ಅವರಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಹೇಳಿದರು.
ನಂತರ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಪಿ ಶಶಿಧರ್ ತಾಜಾ ವಸ್ತುಗಳು ಸಿಗುವುದು ಬೀದಿಬದಿ ವ್ಯಾಪಾರಿಗಳ ಹತ್ತಿರ. ಹಲವಾರು ತೊಂದರೆಗಳನ್ನು ಅನುಭವಿಸುತ್ತಿರುವುದು ಬೀದಿಬದಿ ವ್ಯಾಪಾರಿಗಳೇ ಅವರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಶಾಸನಬದ್ಧವಾಗಿ ಬೀದಿಬದಿ ವ್ಯಾಪಾರಿಗಳಿಗೆ ಅಭಯಸ್ತ ನೀಡಿದೆ ಎಂದರು.
ಬಳಿಕ ಮಾತನಾಡಿದ ಕುಶಾಲನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಬೀದಿ ಬದಿ ವ್ಯಾಪಾರಿಗಳು ತಮ್ಮ ಮುಂದಿನ ಭವಿಷ್ಯಕ್ಕೆ ಹಣವನ್ನು ಕೂಡಿಟ್ಟುಕೊಳ್ಳಬೇಕು ಸರ್ಕಾರ ಸಾಲದ ರೂಪದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ನೀಡುತ್ತಿದ್ದು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಅತಿ ಹೆಚ್ಚಿನ ಸಾಲ ಪಡೆದು ವ್ಯಾಪಾರ ಅಭಿವೃದ್ಧಿಪಡಿಸಬೇಕು ಸರ್ಕಾರದ ಯೋಜನೆಯನ್ನುಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬಿದಿಬದಿ ವ್ಯಾಪಾರಿಗಳ ಜಿಲ್ಲಾಧ್ಯಕ್ಷ ಆದ0.ಎಸ್ ವಹಿಸಿದ್ದರು.
ಈ ಸಂದರ್ಭ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರಜಾಕ್, ಪುರಸಭೆ ಮಾಜಿ ನಾಮ ನಿರ್ದೇಶಕ ಸದಸ್ಯ ಪ್ರಕಾಶ್. ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ. ಬೀದಿ ಬದಿ ವ್ಯಾಪಾರಿಗಳ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸಲಿನ ಪೆದ್ರು. ಒಕ್ಕೂಟದ ಅಧ್ಯಕ್ಷ ಜಗದೀಶ್ ಮುಂತಾದವರು ಇದ್ದರು.
Back to top button
error: Content is protected !!