ಧಾರ್ಮಿಕ

ಕೊಡಗಿನ ಸ್ವಾಮೀಜಿಗಳ ತಂಡದಿಂದ ವೈಷ್ಣೋದೇವಿ ದರ್ಶನ

ಕುಶಾಲನಗರ, ಮಾ 09: ಕೊಡಗು ಜಿಲ್ಲೆಯ ವಿವಿಧ ಮಠಗಳ ಮಠಾಧೀಶರ ತಂಡ ಜಮ್ಮು ಕಾಶ್ಮೀರ ಧರ್ಮ ಕ್ಷೇತ್ರಗಳ ಯಾತ್ರೆ ಕೈಗೊಂಡಿದೆ.
ಸೋಮವಾರ ಶ್ರೀಗಳ ತಂಡ ವೈಷ್ಣೋದೇವಿಯ ದರ್ಶನ ಪಡೆಯಿತು.
ಈ ಸಂದರ್ಭ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳೂರಿನ ಶ್ರೀ ಸ್ವತಂತ್ರ ಬಸವಲಿಂಗ ತೋಂಟದಾರ್ಯ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿ, ಮನೆಹಳ್ಳಿ ತಪೋಕ್ಷೇತ್ರದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ,
ಸಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಮೊದಲಾದವರು ಇದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!