ಕುಶಾಲನಗರ, ಮಾ 14: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ಕುಶಾಲನಗರದ ಹಳೆ ಮಾರುಕಟ್ಟೆ ರಸ್ತೆಯ ಚಿಕ್ಕಣ್ಣ ಬಡಾವಣೆಯಲ್ಲಿ 2 ರೂ ಕೋಟಿ ವೆಚ್ಚದಲ್ಲಿ ನೂತನ ಠಾಣೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಅರುಣ್ ಮಾಚಯ್ಯ, ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಮಂಜುನಾಥ್ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಬಾಬು ವೇದಿಕೆಯಲ್ಲಿದ್ದರು.
ತಹಸೀಲ್ದಾರ್ ಕಿರಣ್ ಜಿ ಗೌರಯ್ಯ,
ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಪ್ರದೀಪ್ ಕುಮಾರ್ ಸೇರಿದಂತೆ ಪೊಲೀಸ್ ಠಾಣಾಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
Back to top button
error: Content is protected !!