ಕುಶಾಲನಗರ, ಏ 22: ದಿನಾಂಕ: 22-04-2026 ರ ಬುಧವಾರ ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಸಾಧಕ ರೈತರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೊಡಗಿನ ಹೆಸರಾಂತ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಸಂಸ್ಥೆಯ ವಿಧ್ಯಾರ್ಥಿಗಳು ಶ್ರೀ ವಿಘ್ನ ವಿನಾಯಕನ ಅದ್ದೂರಿ ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮ ರಂಗೇರಿಸಿದರು. ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ರೈತರನ್ನು ಗುರುತಿಸಿ ಸನ್ಮಾನಿಸುವ ವಿ.ಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮಕ್ಕೆ ನೃತ್ಯ ಸಂಯೋಜಕ ಅಕ್ತರ್ ರವರ ನೇತೃತ್ವದ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ವಿಧ್ಯಾರ್ಥಿಗಳ ನೃತ್ಯವನ್ನು ಮೆಚ್ಚಿ ವಿಜಯ ಕರ್ನಾಟಕ ಮತ್ತು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವತಿಯಿಂದ ಭಾಗವಹಿಸಿದ ಎಲ್ಲಾ ವಿಧ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಆಕರ್ಷಕ ಪಾರಿತೋಷಕವನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು ಮತ್ತು ಸುಪರ್ ಸ್ಟಾರ್ ರೈತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲಾ ಅತಿಥಿ ಗಣ್ಯರು, ಪತ್ರಕರ್ತರು ಮತ್ತು ರೈತ ಭಾಂದವರು ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯಪಟುಗಳ ಅದ್ಭುತ ನೃತ್ಯವನ್ನು ವೀಕ್ಷಿಸಿ ಚಪ್ಪಾಳೆ ಮೂಲಕ ಪ್ರೋತ್ಸಾಹಿಸಿ ಅಭಿನಂದಿಸಿದರು.
Back to top button
error: Content is protected !!