ಕುಶಾಲನಗರ ಮೇ 17: ಕೊಡಗು ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಕ್ರಮವಾಗಿ ಮಿತಿಮೀರಿದ ಡೊನೇಷನ್ ವಸೂಲಿ ಪ್ರಕರಣಗ ಕಂಡುಬಂದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಹೆಚ್.ಶಿವರಾಮೇಗೌಡರ ಬಣದ ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಎಚ್ಚರಿಸಿದ್ದಾರೆ.
ಈಗಾಗಲೆ ಅಡ್ಮಿಷನ್ ಪ್ರಕ್ರಿಯೆ ಆರಂಭಗೊಂಡಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕೆನ್ನುವ ಬಡ ಪೋಷಕರಿಗೆ ಮಿತಿಮೀರಿದ ಡೊನೇಶನ್ ವಸೂಲಿ ನುಂಗಲಾರದ ತುತ್ತಾಗಿದೆ. ಇದರಿಂದ ಬಡ, ಮಧ್ಯಮ ವರ್ಗದ ಪೋಷಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಶಾಲಾ-ಕಾಲೇಜುಗಳು ದುಬಾರಿ ಶುಲ್ಕ ಮತ್ತು ಡೊನೇಷನ್ ವಸೂಲಿ ಮಾಡುತ್ತಿರುವ ಬಗ್ಗೆ ತಮಗೆ ದೂರು ನೀಡಿದಲ್ಲಿ ಅಂತಹ ಸಂಸ್ಥೆಗಳ ವಿರುದ್ದ ಪ್ರತಿಭಟನೆ ನಡೆಸಲಾಗುವುದು ಎಂದು ದಿನೇಶ್ ತಿಳಿಸಿದ್ದಾರೆ.
Back to top button
error: Content is protected !!