ಸುದ್ದಿಗೋಷ್ಠಿ

ಮೇ 31 ರಂದು ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

ಕುಶಾಲನಗರ, ಮೇ 18: ಕೊಡಗು ಜಿಲ್ಲೆಯ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ನಿಯಮಿತದ ಉದ್ಘಾಟನೆ ಸಮಾರಂಭ ಮುಂದೂಡಲಾಗಿದ್ದು, ಮೇ 31 ರಂದು ಕುಶಾಲನಗರದ ಕೆ.ಇ.ಬಿ.‌ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು‌ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 20 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರು, ಶಾಸಕರ ಅಲಭ್ಯತೆ ಕಾರಣ ಮುಂದೂಡಲಾಗಿದೆ ಎಂದು ತಿಳಿಸಿದರು.

ಸಂಘದ ನೂತನ ಕಛೇರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ.

ನಂತರ ಕಲಾಭವನದಲ್ಲಿ ನಡೆಯಲಿರುವ ವೇದಿಕೆ‌ ಕಾರ್ಯಕ್ರಮದಲ್ಲಿ ಹೆಚ್.ಡಿ. ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕ ಮಾಧು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಕ್ಕೆ ಪುಷ್ಪಾ ರ್ಚನೆ ಮಾಡಲಿದ್ದಾರೆ.

ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಉದ್ಘಾಟಿಸಲಿದ್ದಾರೆ. ಸಂಘದ ಪಾಲು ಬಂಡವಾಳ ದೃಢೀಕರಣ ಪತ್ರವನ್ನು ಸಹಕಾರ ಇಲಾಖೆಯ ಮಾಜಿ ಸಚಿವರು, ಹಾಲಿ ಶಾಸಕ ಕೆ.ಎನ್. ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ. ಎನ್. ಪೂನ್ನಣ್ಣ ಅವರು ಎಸ್. ಎಸ್ ಎಲ್. ಸಿ. ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್,ಕುಶಾಲನಗರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಂಪನಾಯಕ‌, ರಾಜ್ಯ ‌ವಾಲ್ಮೀಕಿ ಮಹಾಸಭಾ ಯುವ ಘಟಕ ರಾಜ್ಯಾಧ್ಯಕ್ಷ ಟಿ. ಆರ್. ತುಳಸಿರಾಮ್, ಮೈಸೂರು ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್ ಟಿ. ಕಾಟೂರು, ಜಿಲ್ಲಾ ಸ್ಥಾಪಕ ಅಧ್ಯಕ್ಷ ಕೆ.ಎನ್. ಅಶೋಕ್, ಪಿ. ಟಿ ಸುರೇಶ್, ಪಾಲ್ಗೊಳ್ಳಲಿದ್ದಾರೆ. ಶ್ರೀ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಸಂಘದ ನಿರ್ದೇಶಕ ಬಿ.ಎಸ್.ಚಂದನ್ ಕುಮಾರ್ ಮಾತನಾಡಿ, ತುಮಕೂಲಿನಲ್ಲಿ‌ ರಾಜ್ಯ ಸರಕಾರದ ಸಾಧನಾ ಸಮಾವೇಶ ಕಾರಣ ಕಾರ್ಯಕ್ರಮ ಮುಂದೂಡಲಾಗಿದೆ.
ಸಂಘದ ಸದಸ್ಯತ್ವ ಮುಂದುವರೆಸಿದ್ದು ಅಂದಿನ ಕಾರ್ಯಕ್ರಮದಲ್ಲಿ ವಿಶೇಷ ಕೌಂಟರ್ ಗಳನ್ನು ಸ್ಥಾಪಿಸಿ ನೋಂದಣಿ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ನಿರ್ದೇಶಕರುಗಳಾದ ಕೃಷ್ಣ ಆರ್, ಶ್ರೀನಿವಾಸ ಕುಮಾರ್, ಮಂಜುನಾಥ್ ಎಸ್.ಎಸ್, ನಾರಾಯಣ ಸ್ವಾಮಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!