ಶಿಕ್ಷಣ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕುಶಾಲನಗರ, ಮೇ 25: ಶ್ರೀ ವಿವೇಕಾನಂದ ವಿದ್ಯಾಸಂಸ್ಥೆಯ ವಿವೇಕಾನಂದ ಪದವಿಪೂರ್ವ ಕಾಲೇಜು ಕುಶಾಲನಗರದಲ್ಲಿ 2026-27ರ ಶೈಕ್ಷಣಿಕ ಸಾಲಿಗೆ ದಾಖಲಾತಿಯನ್ನು ಪಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾರಂಭೋತ್ಸವದಂದು(25.05.2026) ವಿಶಿಷ್ಟವಾಗಿ ಸ್ವಾಗತವನ್ನು ಕೋರಲಾಯಿತು. ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಹಾಗೂ ಕಾಲೇಜಿನಲ್ಲಿ ಪಾಲಿಸಬೇಕಾದ ನಿಯಮಗಳನ್ನು ವಿದ್ಯಾರ್ಥಿಗಳಿಗೆ orientatin session ಕಾರ್ಯಕ್ರಮದಲ್ಲಿ ಪರಿಚಯಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂತೋಷದಿಂದ ಬರಮಾಡಿಕೊಂಡರು. ಸಂಸ್ಥೆಯ ಅಧ್ಯಕ್ಷರಾದ ಶಂಭುಲಿಂಗಪ್ಪರವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!