ಕುಶಾಲನಗರ,ಜೂ.4: ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮಗಳನ್ನು ನಿರ್ವಹಿಸುವ ಅಂಗವಾಗಿ ಕುಶಾಲನಗರ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕುಶಾಲನಗರ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್ ಅಪ್ಪಣ್ಣ ಅವರ ಅಧ್ಯಕ್ಷತೆಯಲ್ಲಿ ಮುಳ್ಳುಸೋಗೆಯಲ್ಲಿರುವ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಅಂಚಿನ ಪ್ರದೇಶಗಳು ಮಳೆಗಾಲದಲ್ಲಿ ಜಲಾವೃತ್ತಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ನೀರು ತಗ್ಗುಪ್ರದೇಶಗಳಿಗೆ ನುಗ್ಗಿ ಅವಾಂತರಗಳು ಸೃಷ್ಠಿಯಾದ ಸಂದರ್ಭ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳಿಗೆ, ವಿವಿಧ ಇಲಾಖೆಯ ಅಧಿಕಾರಿ ವರ್ಗದವರಿಗೆ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ಕೃಷಿ, ತೋಟಗಾರಿಕೆ ಇಲಾಖೆ, ಇಂಜಿನಿಯರ್ ವಿಭಾಗ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನದಿಯ ಅಂಚಿನ 10 ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿಗಳು ಹಾಜರಿದ್ದರು.
Back to top button
error: Content is protected !!