ಕುಶಾಲನಗರ, ಜೂ 06:
ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಫ್ರಶರ್ಸ್ ಡೇ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಸಾಧನೆಯ ಸಂಭ್ರಮ ಕಾರ್ಯಕ್ರಮ ನಡೆಯಿತು.
ವಿದ್ಯಾಸಂಸ್ಥೆಯ ಗೌರವ ಪ್ರಾಂಶುಪಾಲ ಎಂ.ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕುಶಾಲನಗರದಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ಕಾರಣ ದೂರದ ಕಾಲೇಜುಗಳಿಗೆ ಅಲೆಯುವ ಪರಿಸ್ಥಿತಿ ಬಹುತೇಕ ಮಂದಿಗೆ ತಪ್ಪಿದೆ. ಇಲ್ಲಿ
ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದ ರೀತಿ ಸಂಸ್ಥೆಯ ಉಪನ್ಯಾಸಕ ವೃಂದ ಪ್ರಾಮಾಣಿಕವಾದ ಬೋಧನೆ ಮಾಡುತ್ತಿದೆ ಎಂದರು. ಜೀವ ರಕ್ಷಕ ಮೆಡಿಕಲ್ ಕ್ಷೇತ್ರದತ್ತ ಹೆಚ್ಚಿನ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕಿದೆ ಎಂದು ಸೂಚಿಸಿದ ಅವರು, ಅಂತಹ ವಿದ್ಯಾರ್ಥಿಗಳಿಗೆ ವೈಯಕ್ತಿಕ ನೆರವು ನೀಡುವುದಾಗಿ ಘೋಷಿಸಿದರು.
ಮೋಟಿವೇಷನಲ್ ಸ್ಪೀಕರ್ ಸ್ಮಿತೇಶ್ ಬಾರ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪ್ರತಿ ವಿಚಾರದಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸುವ ಅಗತ್ಯವಿದೆ. ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದುವ ಮೂಲಕ ಅದನ್ನು ಸಾಕಾರಗೊಳಿಸಲು ಅಡೆತಡೆಗಳನ್ನು ಗಮನಿಸದೆ ಏಕಾಗ್ರತೆಯಿಂದ ಪರಿಶ್ರಮ ಮೂಲಕ ಪ್ರಯತ್ನಿಸುವುದು ಬಹುಮುಖ್ಯ ಎಂದರು.
ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಸ್ವಾಗತ ಭಾಷಣ ಮಾಡಿದರು. ವಿವೇಕಾನಂದ ವಿದ್ಯಾಸಂಸ್ಥೆ ವರ್ಷದಿಂದ ವರ್ಷಕ್ಕೆ ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ ಎಂದರು.
ತರಗತಿಗಳ ನೂತನ ಪ್ರತಿನಿಧಿಗಳಿಗೆ ಪದಗ್ರಹಣ ನೆರವೇರಿಸಲಾಯಿತು.
ಪಿಯು ಶಿಕ್ಷಣ ಮುಗಿಸಿ ಪದವಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ವಿವೇಕಾನಂದ ಎಜ್ಯುಕೇಷನಲ್ ಟ್ರಸ್ಟ್ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ
ಎಂಜಿಎಂ ಕಾಲೇಜು ಪ್ರಾಂಶುಪಾಲೆ ಲಿಖಿತಾ ಟಿ.ಎ, ಕಛೇರಿ ಅಧೀಕ್ಷಕ ಮಹೇಶ್ ಅಮೀನ್, ಯೋಗಾ ಶಿಕ್ಷಕ ಶಿವರಾಂ ಸೇರಿದಂತೆ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಇದ್ದರು.
Back to top button
error: Content is protected !!