ಶಿಕ್ಷಣ

ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ ಕಾರ್ಯಕ್ರಮ

ಕುಶಾಲನಗರ, ಜೂ 06: ಕುಶಾಲನಗರದ ಮಹಾತ್ಮಾ ಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿ.ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್ ಬಿ.ಎಸ್ ಭಾಗವಹಿಸಿ  ಪದವಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶುಭಾಶಯಗಳನ್ನು ತಿಳಿಸಿದರು. ಜೀವನದಲ್ಲಿ ಶಿಸ್ತು, ಪರಿಶ್ರಮ ಹಾಗೂ ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಉನ್ನತ ಸಾಧನೆಗಳತ್ತ ಮುನ್ನಡೆಯುವಂತೆ ಕರೆ ನೀಡಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಶಂಭುಲಿಂಗಪ್ಪ ಅವರು ವಹಿಸಿದ್ದರು.

ಅತಿಥಿಗಳಾಗಿ ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತಾ ಟಿ.ಎ., ವಿವೇಕಾನಂದ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ವಾಣಿಜ್ಯ ಉಪನ್ಯಾಸಕ ಸ್ವಾಮಿಗೌಡ ಹಾಗೂ ಕಚೇರಿ ಅಧೀಕ್ಷಕ ಮಹೇಶ್ ಆಮೀನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೃತೀಯ ಬಿ.ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪದವಿಗಳನ್ನು ವಿತರಿಸಲಾಯಿತು. ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ತೃತೀಯ ಬಿ.ಕಾಂ ವಿಭಾಗದ ಮನೀಷ್ ಹಾಗೂ ತೃತೀಯ ಬಿ.ಸಿ.ಎ ವಿಭಾಗದ ತೃಪ್ತಿ ಅವರಿಗೆ ವಿಶೇಷ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆ ದೀಪ್ತಿ ಡಿ ಸೋಜ ನಡೆಸಿಕೊಟ್ಟರು.

Related Articles

Leave a Reply

Your email address will not be published. Required fields are marked *

Back to top button
error: Content is protected !!