ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮೋದಿ ಸಾಧನೆ: ಕುಶಾಲನಗರದಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಜೂ 10: ನರೇಂದ್ರ ಮೋದಿ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕುಶಾಲನಗರದಲ್ಲಿ ಸಂಭ್ರಮಾಚರಣೆ ನಡೆಯಿತು.
ಬಿಜೆಪಿ ಮುಖಂಡರು ಕಾರ್ಯಕರ್ತರು ಶ್ರೀ ಗಣಪತಿ ದೇವಾಲಯದಲ್ಲಿ ಪ್ರಧಾನ ಅವರ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದರು. ನಂತರ ದೇವಾಲಯ ಮುಂಭಾಗ ಪ್ರಧಾನಿ ಪರ ಘೋಷಣೆ ಮೊಳಗಿಸಿ ಸಂಭ್ರಮಿಸಲಾಯಿತು.
ಯುವ ಮೋರ್ಚಾ ನಗರಾಧ್ಯಕ್ಷ ರಾಮನಾಥನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಉಪಾಧ್ಯಕ್ಷ ಎಂ.ಡಿ.ಕೃಷ್ಣಪ್ಪ, ಮಾಜಿ ವಕ್ತಾರ ಕೆ.ಜಿ.ಮನು, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಯುವ ಮೋರ್ಚಾ ಕಾರ್ಯದರ್ಶಿ ಆದರ್ಶ್, ಪ್ರಮುಖರಾದ ಅಮೃತ್ ರಾಜ್, ಡಿ.ಕೆ.ತಿಮ್ಮಪ್ಪ, ಚಂದ್ರಶೇಖರ್ ಹೇರೂರು, ವೈಶಾಖ್ ಸುಮನ್, ಶಿವಾಜಿ, ಮಂಜು, ರಾಮಚಂದ್ರ, ನಾರಾಯಣ, ದಿನೇಶ್ ಮತ್ತಿತರರು ಇದ್ದರು.
Back to top button
error: Content is protected !!