ಶಿಕ್ಷಣ

ಟಿ.ಎ.ನಾರಾಯಣಗೌಡರ ಹುಟ್ಟುಹಬ್ಬ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಕೂಡಿಗೆ, ಜೂ. 11: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರ ಹುಟ್ಟು ಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕೂಡಿಗೆಯ ಶ್ರೀ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳ ವಿತರಣೆಯ ಜೊತೆಯಲ್ಲಿ ಸಿಹಿ ವಿತರಣೆ ಮಾಡಲಾಯಿತು.
ಈ ಸಂದರ್ಭ ಕರವೇ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ಕೊಡಗು ಜಿಲ್ಲಾಧ್ಯಕ್ಷ ಕೆ.ಪಿ. ರಾಜು, ಕೊಡಗು ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಕುದುಪಜೆ, ಜಿಲ್ಲಾ ಸಂಚಾಲಕ ಗೋವಿಂದರಾಜ ದಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ , ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಭಾಗ್ಯ, ಕುಶಾಲನಗರ ತಾಲೂಕು ಗೌರವಾಧ್ಯಕ್ಷ ರೊನಾಲ್ಡ್, ಕುಶಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ, ತಾಲೂಕು ಉಪಾಧ್ಯಕ್ಷ ಫಯಾಜ್, ತಾಲೂಕು ಕಾರ್ಯದರ್ಶಿ ಹರೀಶ್, ಸದಸ್ಯರಾದ ಅಶ್ವಿನಿ , ಕೆ.ಜಿ ಮಂಜಯ್ಯ, ಸದ್ಗುರು ಅಪ್ಪಯ್ಯ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪುಷ್ಪ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!