ಪ್ರಕಟಣೆ

ಜೂ 30 ರಂದು ಕುಶಾಲನಗರದಲ್ಲಿ ಡಾ ಸಾಲುಮರ ತಿಮ್ಮಕ ಸ್ಮರಣೆ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಕುಶಾಲನಗರ,ಜೂ 29:ಅರಣ್ಯ ಇಲಾಖೆ ಮತ್ತು ಕುಶಾಲನಗರ ಪರಿಸರ ರಕ್ಷಣಾ ಬಳಗ ಆಶ್ರಯದಲ್ಲಿ ಇಂದು ಮಂಗಳವಾರ ವೃಕ್ಷಮಾತೆ ಡಾ ಸಾಲುಮರ ತಿಮ್ಮಕ ಸ್ಮರಣೆ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ರೋಟರಿ ಉದ್ಯಾನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಅಭಿಷೇಕ್ ವಿ ಅವರು ಚಾಲನೆ ನೀಡುವರು.
ಪರಿಸರ ತಜ್ಞರಾದ ಭಜನ್ ಬೋಪಣ್ಣ ಅವರು ಪ್ರಕೃತಿ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಪಾತ್ರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ಎಂಎನ್ ಚಂದ್ರಮೋಹನ್ ವೃಕ್ಷ ಮಾತೆ ಡಾ ಸಾಲುಮರ ತಿಮ್ಮಕ್ಕ ಅವರ ಬಗ್ಗೆ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕುಶಾಲನಗರ ಅರಣ್ಯ ವಲಯ ಅಧಿಕಾರಿ ರಕ್ಷಿತ್, ಪೊಲೀಸ್ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಕೊಪ್ಪ ಭಾರತ ಮಾತಾ ಕಾಲೇಜು ಪ್ರಾಂಶುಪಾಲರಾದ ಟಿಟ್ಟೋ ಥಾಮಸ್ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕರಾದ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!