ಕಾರ್ಯಕ್ರಮ

ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

ಕುಶಾಲನಗರ, ಜು 06: ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಕುಶಾಲನಗರದ ಡಾ ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಮಧು, ರವಿ, ಕುಶಾಲನಗರ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಉದಯಕುಮಾರ್, ಆರೋಗ್ಯ ಇಲಾಖೆಯ ಶಿಕ್ಷಣ ಅಧಿಕಾರಿ ಶಾಂತಿ ಮತ್ತು ಆಯುಷ್ ಇಲಾಖೆಯ ಸಿಬ್ಬಂದಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!