ಸಾಂಸ್ಕೃತಿಕ

ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜಿನ ಆರೋಹಣ್ ಫೆಸ್ಟ್-2026 ಕಾರ್ಯಕ್ರಮ

ಕುಶಾಲನಗರ, ಜು 11: ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜಿನ ಫ್ರೆಶರ್ಸ್ ಡೇ ಆರೋಹಣ್ ಫೆಸ್ಟ್-2026 ಕಾರ್ಯಕ್ರಮ ರೈತ ಭವನದಲ್ಲಿ ನಡೆಯಿತು.
ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗಣೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಜೀವನದ ಪ್ರಮುಖ ಘಟ್ಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಶ್ರಮವಹಿಸಿದಲ್ಲಿ ಮುಂದಿನ ಜೀವನ ಸುಗಮವಾಗಲಿದೆ. ಎಸ್ಸೆಸ್ಸೆಲ್ಸಿ, ಪಿಯು ಹಂತದಲ್ಲಿ ಶ್ರದ್ದೆಯಿಂದ ವಿದ್ಯಾರ್ಜನೆ ಮಾಡುವ ಮೂಲಕ ಸುಭದ್ರ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಸಾಮಾಜಿಕ ಜಾಲತಾಣಗಳನ್ನು ಸಕಾರಾತ್ಮಕವಾಗಿ ಬಳಕೆ‌ ಮಾಡಿಕೊಳ್ಳಬೇಕಿದೆ ಎಂದರು.
ಸಂಚಾರಿ ನಿಯಮಗಳ ಪಾಲನೆ, ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.
ಕಾಲೇಜು ಪ್ರಾಂಶುಪಾಲ ನಾಗೇಂದ್ರಸ್ವಾಮಿ ಪ್ರಾಸ್ತಾವಿಕವಾಗಿ ‌ಮಾತನಾಡಿದರು.
ಪಿರಿಯಾಪಟ್ಟಣ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಂಡಸ್ವಾಮಿ ಬಿ ಮುಖ್ಯ ಭಾಷಣ ಮಾಡಿದರು.
ಪ್ರಧಾನ ಗೌತಮ್ ವಿದ್ಯಾ ಟ್ರಸ್ಟ್‌ ಕಾರ್ಯದರ್ಶಿ ರಾಮಕೃಷ್ಣ, ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಇದ್ದರು‌‌

Related Articles

Leave a Reply

Your email address will not be published. Required fields are marked *

Back to top button
error: Content is protected !!