ದೇವಾಲಯ

ಬಸವೇಶ್ವರ ದೇವಾಲಯದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಭರವಸೆ

ಕೂಡಿಗೆ, ಜು. 22: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಅಭಿವೃದ್ಧಿಗೆ ಮತ್ತು ಅದಕ್ಕೆ ಸಂಬಂಧಿಸಿದ ಸಮುದಾಯದ ಭವನ ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಯ ಮುಖೇನ ಅನುದಾನವನ್ನು ನೀಡುವ ಭರವಸೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದರು.
ಅವರು ಸೀಗೆಹೊಸೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯಕ್ಕೆ ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಹಾಜರಿದ್ದ ನೂರಾರು ಗ್ರಾಮಸ್ಥರ ಬೇಡಿಕೆಯ ಅನುಗುಣವಾಗಿ ಈ ಸಾಲಿನಲ್ಲಿ ಸಮುದಾಯ ಭವನಕ್ಕೆ ಕ್ರಿಯಾ ಯೋಜನೆ ಅನುಗುಣವಾಗಿ ಅನುದಾನವನ್ನು ಒದಗಿಸುವುದಾಗಿ ಗ್ರಾಮಸ್ಥರ ಸಮ್ಮುಖ ದೇವಾಲಯದ ಆವರಣದಲ್ಲಿ ಬರವಸೆ ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತಾನಾಡಿ ಶಾಸಕರ ಅನುದಾನದಲ್ಲಿ ಈ ಭಾಗದಲ್ಲಿ ರಸ್ತೆ ಸೇರಿದಂತೆ ಕುಡಿಯುವ ನೀರು, ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ಎತ ನೀರಾವರಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಅದರ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಅನಂತ, ಶಿವಕುಮಾರ್, ಚಂದ್ರು ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಧನಂಜಯ, ಕಾರ್ಯದರ್ಶಿ ನಾಗೇಶ್, ಸೇರಿದಂತೆ ನೂರಾರು ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!