ಕುಶಾಲನಗರ, ಜು.29: ಒಂದು ವರ್ಷದ ಹಿಂದೆಯಷ್ಟೇ ಉದ್ಘಾಟನೆಯಾದ ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕುಶಾಲನಗರ ಪುರಸಭೆ ನೂತನ ಕಟ್ಟಡದ ಮೇಲ್ಪಾವಣಿಯಿಂದ ನೀರು ಸೋರುತ್ತಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಆನಂದ್ ಕನ್ನಡಿಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗೆ ಕಟ್ಟಡದ ಒಳಗೆ ನೀರು ಸೋರಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ. ದಾಖಲೆಗಳು, ಕಡತಗಳು ಒದ್ದೆಯಾಗುವ ಭೀತಿ ಎದುರಾಗಿದೆ.
ಒಂದು ವರ್ಷದ ಹಿಂದೆ ಅದ್ಧೂರಿಯಾಗಿ ಉದ್ಘಾಟನೆಯಾಗಿದ್ದ ಈ ಕಟ್ಟಡದ ಕಾಮಗಾರಿ ಗುಣಮಟ್ಟದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾದ ಕಟ್ಟಡದ ಸ್ಥಿತಿ ನೋಡಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಪರವಾನಗಿ ರದ್ದುಗೊಳಿಸಿ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
Back to top button
error: Content is protected !!