ಕುಶಾಲನಗರ, ಆ 08 ಬಸವನಹಳ್ಳಿಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ ಬಾಲಕಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ಶನಿವಾರ ನೀಡಿ ಅಂತಿಮ ಸಮನ ಸಲ್ಲಿಸಿದರು.
ಶಿಥಿಲಗೊಂಡಿದ್ದ ಶಾಲಾ ಕಾಂಪೌಂಡ್ ಗೇಟ್ ಬಾಲಕಿ ಮೇಲೆ ಕುಸಿದ ಪರಿಣಾಮ ಬಾಲಕಿ ಅಪೂರ್ವ ಶುಕ್ರವಾರ ಮೃತಪಟ್ಟಿದ್ದಳು.
ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಪರಿಶೀಲನೆ ನಡೆಸಿದ ಬಳಿಕ ಬಾಲಕಿ ಪೋಷಕರಿಗೆ ಸಾಂತ್ವನ ಹೇಳಿದರು.
ಸಂಬಂಧಿಸಿದ ಇಲಾಖೆಗಳಿಂದ ಆದಷ್ಟು ಬೇಗ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು.
ಬಸವನಹಳ್ಳಿ ಹಾಡಿಯಲ್ಲಿನ ಸಮಸ್ಯೆಗಳ ಕುರಿತು ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಮಡಿಕೇರಿ ಕ್ಷೇತ್ರದ ಹಾಡಿಗಳಲ್ಲಿ ಇನ್ನು ಯಾವುದೇ ಅನಾಹುತಗಳು ಉಂಟಾಗದಂತೆ ಎಚ್ಚರಿಕೆ ವಹಿಸಲು ಐಟಿಡಿಪಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ತಹಸೀಲ್ದಾರ್ ಕೃಷ್ಣಮೂರ್ತಿ, ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಆರ್.ಕೆ.ಚಂದ್ರ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮತ್ತಿತರರು ಇದ್ದರು.
Back to top button
error: Content is protected !!