ಕಾರ್ಯಕ್ರಮ

ಕೂಡಿಗೆ ಡೈರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಿಗೆ, ಆ. 15: ಕೂಡಿಗೆ ಡೈರಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಧ್ವಜಾರೋಹಣವನ್ನು ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ನೆರವೇರಿಸಿ ,ದಿನದ ಮಹತ್ವದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕೂಡುಮಂಗಳೂರು ಸಹಕಾರ ಸಂಘ ನಿರ್ದೇಶಕರಾದ ಕೆ.ಪಿ. ರಾಜು, ರಾಮಚಂದ್ರ, ಪದವಿ ಪೂರ್ವ ಕಾಲೇಜಿನ ಮಾಜಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಕೂಡಿಗೆ ಡೈರಿ ವ್ಯವಸ್ಥಾಪಕ ನಂದೀಶ್, ಸೇರಿದಂತೆ ಅಧಿಕಾರಿ ವರ್ಗದವರು, ಕಾರ್ಮಿಕ ವೃಂದ, ಸೇರಿದಂತೆ ನೂರಾರು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಡೈರಿ ವತಿಯಿಂದ ಸಾವಿರಾರು ಸಿಹಿ ಹಾಲಿನ ಪ್ಯಾಕೆಟ್ ಗಳನ್ನು ವಿತರಣೆ ಮಾಡಲಾಯಿತು. ಡೈರಿ ಸಿಬ್ಬಂದಿ ಕಾಂತಾರಾಜ್ ಸ್ವಾಗತಿಸಿ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!