ಅರಣ್ಯ ವನ್ಯಜೀವಿ

ಕಾಡಾನೆ ಹಾವಳಿ ತಡೆಗಟ್ಟಲು ಒತ್ತಾಯಿಸಿ ರೈತರ ಪ್ರತಿಭಟನೆ

ಕುಶಾಲನಗರ, ಆ 17: ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ರೈತರ ಜೀವ, ಆಸ್ತಿ ಮತ್ತು ಬೆಳೆಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿ

ಸುಂಟಿಕೊಪ್ಪ ರೈತ ಸಂಘದ ವತಿಯಿಂದ ಅರಣ್ಯ ಇಲಾಖೆ ವಿರುದ್ದ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳ ಕಛೇರಿ‌ ಮುಂಭಾಗ ಪ್ರತಿಭಟನೆ ನಡೆಯಿತು.

ಸುಂಟಿಕೊಪ್ಪ ಹೋಬಳಿಯ ಹೇರೂರು, ಕಲ್ಲೂರು, ನಾಕೂರು, ಶಿರಂಗಾಲ, 7 ನೇ ಹೊಸಕೋಟೆ, ಕಂಬಿಬಾಣೆ, ಸುಂಟಿಕೊಪ್ಪ, ಕೊಡಗರಹಳ್ಳಿ ಹಾಗೂ ಕೆದಕಲ್ ಭಾಗಗಳಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ರೈತರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿ ಅರಣ್ಯಾಧಿಕಾರಿಗಳು ಮತ್ತು ಸರಕಾರದ ವಿರುದ್ದ ಧಿಕ್ಕಾರ ಕೂಗಿದರು. ಸ್ಥಳಕ್ಕೆ ಶಾಸಕರು, ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಆಗಮಿಸಿ ಮನವಿ‌ ಆಲಿಸಬೇಕಿದೆ ಎಂದು ಪಟ್ಟು ಹಿಡಿದರು.
ಸ್ಥಳಕ್ಕೆ ಆಗಮಿಸಿದ ಕುಶಾಲನಗರ ವಲಯ ಅರಣ್ಯಾಧಿಕಾರಿಗಳ ಪ್ರತಿಭಟನಾಕಾರರ‌ ಮನವೊಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ.
ಸಂಘದ
ಅಧ್ಯಕ್ಷ ಕ್ಲೈವ್ ಪೊನ್ನಪ್ಪ,
ಪದಾಧಿಕಾರಿಗಳಾದ ಚಂದ್ರಶೇಖರ್ ಹೇರೂರು,ಅರುಣ್ ಚೆಂಗಪ್ಪ ದಾಸಂಡ ರಮೇಶ್ ಚೆಂಗಪ್ಪ, ಕುಂಜಲಿನ ಮಂಜುನಾಥ್ ಕಂಬಿಬಾಣೆ, ಜವಾಹರ್, ಶಾಶ್ವತ್ ಅಂದಗೋವೆ, ಅಯ್ಯಣ್ಣ ನಾಕೂರು, ವಸಂತ್ ಹಾರನ ಬೈಲ್,ಹಿತೇಶ್ ಕಾನ್ ಬೈಲ್, ಶಿವಶಂಕರ್ ಕೆದೆಕಲ್, ಸಂತೋಷ್ ಪೂವಯ್ಯ, ಅಶೋಕ್ ಹೊಸಕೋಟೆ, ವಿನಯ್ ಕಲ್ಲೂರು, ಜಗನಾಥ್ ಮಂದೋಡಿ, ಪ್ರಶಾಂತ್ ಕಲ್ಲೂರು ಹಾಗು ಆಕರ್ಷ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!