ಕುಶಾಲನಗರ, ಸೆ 01: ಉತ್ತರಾಖಂಡ್‌ನ ಹಲ್ದ್ವಾನಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ಅಧ್ಯಕ್ಷ *ಜೋಸೆಫ್ ವಿಕ್ಟರ್ ಸೋನ್ಸ್* ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ *ಡಾ. ಮಂತರ್ ಗೌಡ* ಭಾಗಿಯಾಗಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಮತ್ತು ಜೋಸೆಫ್ ವಿಕ್ಟರ್ ಸೋನ್ಸ್, ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಅವರ ಮೇಲೆ ಸೇಡಿನಿಂದ ಎಫ್‌ಐಆರ್ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ರಾಹುಲ್ ಗಾಂಧಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್. ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತಪ್ಪ. ಪ್ರಕಾಶ್. ಕಿರಣ್ ಪುರಸಭೆ ಮಾಜಿ ಸದಸ್ಯ ಶಿವಶಂಕರ್, ಕಾಂಗ್ರೆಸ್ ಕಾರ್ಯಕರ್ತ ನಯಾಜ್. ಇರ್ಫಾನ್. ಅಜೀಜ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Back to top button
error: Content is protected !!