ಅರಣ್ಯ ವನ್ಯಜೀವಿ

ಹಾರಂಗಿ ಸಾಕಾನೆ ಶಿಬಿರ, ಟ್ರೀ‌ಪಾರ್ಕ್ ಪುನರಾರಂಭ

ಕುಶಾಲನಗರ, ಸೆ 03: ಹಾರಂಗಿ ಟ್ರಿ ಪಾರ್ಕ್ ಮತ್ತು ಸಾಕಾನೆ ಶಿಬಿರದಲ್ಲಿ ಸಾರ್ವಜನಿಕರಿಗಾಗಿ ಆನೆಗಳ ಪ್ರದರ್ಶನವನ್ನು ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲಾಗಿದೆ.

ಹಾರಂಗಿ ಟೀ ಪಾರ್ಕ್ ಮತ್ತು ಸಾಕಾನೆ ಶಿಬಿರದಲ್ಲಿ ಸಾರ್ವಜನಿಕರಿಗಾಗಿ ಆನೆಗಳ ಪ್ರದರ್ಶನವನ್ನು ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆನೆಗಳ ಪ್ರದರ್ಶನದ ಸಂದರ್ಭದಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಆನೆಗಳ ಸ್ವಭಾವ ಮತ್ತು ಚಲನವಲನವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರದರ್ಶನ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ಸಾಕಾನೆ ಶಿಬಿರದ ಸಿಬ್ಬಂದಿ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. ಆನೆಗಳ ಸಮೀಪ ತೆರಳುವುದು, ಅವುಗಳನ್ನು ಮುಟ್ಟುವುದು, ಆಹಾರ ನೀಡುವುದು ಅಥವಾ ಯಾವುದೇ ರೀತಿಯ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆನೆಗಳ ಸುರಕ್ಷತೆ, ಕಲ್ಯಾಣ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ, ಸಾರ್ವಜನಿಕರಲ್ಲಿ ಆನೆಗಳ ಸಂರಕ್ಷಣೆ ಮತ್ತು ಅವುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಆನೆಗಳ ಪ್ರದರ್ಶನವನ್ನು ಪುನರಾರಂಭಿಸಲಾಗುತ್ತಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!