ಕುಶಾಲನಗರ, ಸೆ 11: ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ರೇವತಿ ಪೂವಯ್ಯ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲ ಪ್ರೊ.ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿ (IQAC) ಸಂಚಾಲಕರು, ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗದ ಸಂಚಾಲಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು, ಕಾಲೇಜಿನ ಅಧ್ಯಾಪಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Back to top button
error: Content is protected !!