ಕಾರ್ಯಕ್ರಮ

ಕುಶಾಲನಗರದಲ್ಲಿ ರಕ್ತದಾನ ಶಿಬಿರ

ಕುಶಾಲನಗರ, ಸೆ 15:: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ಆಫ್ ಕುಶಾಲನಗರದ ವತಿಯಿಂದ ಎಂಜಿನಿಯರಿಂಗ್ ಕಾಲೇಜು, ಜಿಲ್ಲಾ ರಕ್ತನಿಧಿ ಘಟಕದ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರವನ್ನು ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಸತೀಶ್, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಕೆ. ಸತೀಶ್ ಹಾಗೂ ರೋಟರಿ ಕ್ಲಬ್ ಅಧ್ಯಕ್ಷರಾದ ರುದ್ರೇಶ್ ಪಟೇಲ್ ಅವರು ಉದ್ಘಾಟಿಸಿದರು.

ಶಿಬಿರದಲ್ಲಿ 35ಕ್ಕೂ ಹೆಚ್ಚು ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ರಕ್ತದಾನಿಗಳಿಗೆ ಹಾಗೂ ಶಿಬಿರದ ಆಯೋಜಕರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ರಂಗಸ್ವಾಮಿ, ಕಾರ್ಯದರ್ಶಿ ಚಂದ್ರಶೇಖರ್, ಕಾಲೇಜಿನ ಸಂಗಪ್ಪ, ರೋಟರಿ ಕ್ಲಬ್ ಕಾರ್ಯದರ್ಶಿ ಅರುಣ್ ಕುಮಾರ್, ರೆಡ್‌ಕ್ರಾಸ್ ಸದಸ್ಯರಾದ ಮನ್ನಿ ಸ್ವಾಮಿ, ಗೋಪಾಲ್ ರೆಡ್ಡಿ, ಅಶೋಕ್ ಸೇರಿದಂತೆ ರೆಡ್‌ಕ್ರಾಸ್, ರೋಟರಿ ಕ್ಲಬ್ ಹಾಗೂ ಕಾಲೇಜಿನ ಸದಸ್ಯರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರವು ಸಾರ್ವಜನಿಕರಲ್ಲಿ ಸ್ವಯಂಪ್ರೇರಿತ ರಕ್ತದಾನದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಮಹತ್ವದ ಸಾಮಾಜಿಕ ಸೇವೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!