ಕುಶಾಲನಗರ, ಸೆ 18: : ಕೊಡಗು ಜಿಲ್ಲಾ ಪಂಚಾಯತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕಬಡ್ಡಿ ಚಾಂಪಿಯನ್ ಶಿಷ್ 2026 ನೇ ಕ್ರೀಡಾಕೂಟಕ್ಕೆ ರಾಷ್ಟ್ರೀಯ ಕ್ರೀಡಾ ತರಬೇತುದಾರ ಉತ್ತಪ್ಪ ಚಾಲನೆ ನೀಡಿದರು.
ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜು,ಶನಿವಾರಸಂತೆ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್, ಕನ್ನಡ ಭಾರತಿ ಪಿಯು ಕಾಲೇಜು ಪ್ರಾಂಶುಪಾಲ ಡಾ.ನಾಗೇಂದ್ರ ಸ್ವಾಮಿ,ಪದವಿ ಕಾಲೇಜು ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ತಾಲ್ಲೂಕು ವ್ಯಾಪ್ತಿಯ ವಿವಿದ ಪಿಯು ಕಾಲೇಜುಗಳ 6 ಬಾಲಕರ ಹಾಗೂ 5 ಬಾಲಕಿಯರ ತಂಡಗಳು ಸೇರಿದಂತೆ ಒಟ್ಟು 11 ಕಬಡ್ಡಿ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ತೀರ್ಪುಗಾರರಾಗಿ ಪ್ರವೀಣ್,ಆದರ್ಶ. ಕಾರ್ಯನಿರ್ವಹಿಸಿದರು.
Back to top button
error: Content is protected !!