ಕುಶಾಲನಗರ, ಸೆ 19: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕುಶಾಲನಗರ ಪುರಸಭೆ ವತಿಯಿಂದ ಪೌರಕಾರ್ಮಿಕರ ಕ್ರೀಡಾಕೂಟ ಪಿಎಂಶ್ರೀ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳು ವಿವಿಧ ಕ್ರೀಡಾಕೂಟಗಳಲ್ಲಿ ತಮ್ಮನ್ನ ತೊಡಗಿಸಿಕೊಂಡರು.